ಚಿಕ್ಕಮಗಳೂರು: ಕುದುರೆಮುಖದ ಬಸರೀಕಲ್ ಚೆಕ್ ಪೋಸ್ಟ್ ಪೆಟ್ರೋಲ್ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಚಿಕ್ಕಮಗಳೂರು – ಉಡುಪಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ದಾಳಿ ಹಿಂದೆ ನಕ್ಸಲ್ ಬೆಂಬಲಿಗರ ಕೃತ್ಯದ ಶಂಕೆ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ (ಎಎನ್‍ಎಫ್) ದಿಂದ ಈ ಕೂಂಬಿಂಗ್ ಕಾರ್ಯ ಚುರುಕುಗೊಂಡಿದೆ. ಕೇರಳದ ನಕ್ಸಲರು ಮಲೆನಾಡಲ್ಲಿ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದ್ದು, ಹೀಗಾಗಿ ಚಿಕ್ಕಮಗಳೂರು- ಉಡುಪಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.
Advertisement
Advertisement
ಬಸರೀಕಲ್, ಸಂಸೆ ಮೆಣಸಿನಹಾಡ್ಯ, ಗುಳ್ಯ ಸೇರಿದಂತೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆ, ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಂದಿಗೆ ಎಎನ್‍ಎಫ್ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.
Advertisement
ಭಾನುವಾರ ಏನಾಯ್ತು..?
ಕಚೇರಿಯ ಮೇಲೆ ಭಾನುವಾರ ಬೆಳಗ್ಗಿನ ಜಾವ 3.30ಕ್ಕೆ ಅರಣ್ಯ ಇಲಾಖೆಯ ದಾಳಿ ಮಾಡಿದ್ದರಿಂದ ಕತ್ತಲಿನಲ್ಲಿ ದುಷ್ಕರ್ಮಿಗಳು ಕಾಣಲಿಲ್ಲ. ಸುಮಾರು 6 ಪೆಟ್ರೋಲ್ ಬಾಂಬ್ ಗಳನ್ನು ದುಷ್ಕರ್ಮಿಗಳು ಕಚೇರಿಯ ಮೇಲೆ ಎಸೆದಿದ್ದಾರೆ. ಪರಿಣಾಮ ಕೆಲ ಪೆಟ್ರೋಲ್ ಬಾಂಬ್‍ಗಳು ಕಚೇರಿಯ ಕಿಟಕಿಗೆ ತಗುಲಿದ್ದು, ಅಲ್ಲಿದ್ದ ರಿಜಿಸ್ಟರ್ ಪುಸ್ತಕಕ್ಕೆ ಬೆಂಕಿ ತಗುಲಿತ್ತು. ಅದೃಷ್ಟವಶಾತ್ ಈ ವೇಳೆ ಎಲ್ಲ ಸಿಬ್ಬಂದಿ ಕಚೇರಿಯ ಒಳಗೆ ಇದ್ದಿದ್ದರಿಂದ ಯಾವುದೇ ಸಾವು, ನೋವು ಸಂಭವಿಸಿರಲಿಲ್ಲ.
Advertisement
ದುಷ್ಕರ್ಮಿಗಳು ಖಾಲಿ ಬಾಟಲಿಗೆ ಮರಳು ಹಾಗೂ ಸೀಮೆಎಣ್ಣೆ ತುಂಬಿ ಬೆಂಕಿ ಹಚ್ಚಿ ಎಸೆದಿದ್ದಾರೆ. ಬಾಟಲ್‍ಗಳು ಒಡೆದಿದ್ದು, ಒಟ್ಟು ಆರು ಪೆಟ್ರೋಲ್ ಬಾಂಬ್ ಎಸೆದಿರುವುದು ಪತ್ತೆಯಾಗಿತ್ತು. ಅಷ್ಟೇ ಅಲ್ಲದೆ ಯೋಜಿತವಾಗಿ, ಚೆಕ್‍ಪೋಸ್ಟ್ ಕಚೇರಿಯ ಸಮೀಪದ ಮರದ ಕೆಳಗೆ ನಿಂತು ಕೃತ್ಯವನ್ನು ಎಸಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv