ಕಲಬುರಗಿ: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಶಿವಮೊಗ್ಗ (Shivamogga) ಗಲಾಟೆ ಕುರಿತು ಕಲಬುರಗಿಯಲ್ಲಿ ಸಂಸದ ಡಾ. ಉಮೇಶ್ ಜಾಧವ್ (Umesh Jadhav) ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರ ಮುಂಜಾಗೃತ ಕ್ರಮ ಕೈಗೊಂಡಿದ್ದರೆ ಶಿವಮೊಗ್ಗ ಘಟನೆ ನಡೆಯುತ್ತಿರಲಿಲ್ಲ. ಈದ್ ಮಿಲಾದ್ ಎಂದರೆ ಸೌಹಾರ್ದಯುತ ಹಬ್ಬವಾಗಿರುತ್ತದೆ. ಆದರೆ ಕೆಲ ಕಿಡಿಗೇಡಿಗಳು ಅದೇ ದಿನ ಕಲ್ಲು ತೂರಾಟ ನಡೆಸಿ ಶಾಂತಿ ಭಂಗ ಮಾಡುವ ಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸರಿಯಾದ ಸ್ಥಾನಮಾನದ ಬಗ್ಗೆ ಶಾಮನೂರು ಶಿವಶಂಕರಪ್ಪ ಸರಿಯಾಗಿ ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಲಿಂಗಾಯತ ಸಮಾಜದ ಹಿರಿಯರು. ಅವರು ಹೇಳಿದ ಮಾತು ಸತ್ಯಾವಗಿದೆ ಎಂದರು. ಇದನ್ನೂ ಓದಿ: ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್
ಇದಕ್ಕೆ ಯಡಿಯೂರಪ್ಪ ಅವರು ಸಹ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಹ ಪಾಲಿಕೆಯ ಲಿಂಗಾಯತ ಮುಖಂಡನ ಮೇಲೆ ಹಲ್ಲೆ ಮಾಡಿದ್ರು ಸಹ ಇಲ್ಲಿಯವರೆಗೆ ಆರೋಪಿಗಳನ್ನು ಈ ಸರ್ಕಾರ ಬಂಧಿಸಿಲ್ಲ. ಹೀಗಾಗಿ ಈ ಸರ್ಕಾರದಲ್ಲಿ ವೀರಶೈವ ಲಿಂಗಾಯತರಿಗೆ ಬೆಲೆ ಇಲ್ಲದಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಡಾ. ಉಮೇಶ್ ಜಾಧವ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕೋಮು ಸಂಘರ್ಷ – ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು: ವಿಜಯೇಂದ್ರ
Web Stories