Advertisements

ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಅರೆಸ್ಟ್

ಬೆಂಗಳೂರು: ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

Advertisements

ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ವಿಮಾನ ನಿಲ್ದಾಣ ಸಿಬ್ಬಂದಿ – ವೀಡಿಯೋ ವೈರಲ್‌

Advertisements

ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣೆಗಳಲ್ಲಿ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಇದೆ. ಸೈಯದ್ ಅಸರ್ ವಿರುದ್ಧ ಅಮೃತಹಳ್ಳಿ, ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ ದಾಖಲಾಗಿತ್ತು.

Advertisements
Advertisements
Exit mobile version