ಮಿಸ್ ಬಿಕಿನಿ ಇಂಡಿಯಾ ಅರ್ಚನಾ ಕಾಂಗ್ರೆಸ್‍ನಿಂದ ಚುನಾವಣಾ ಅಭ್ಯರ್ಥಿ- ರಾಜಕೀಯಕ್ಕೆ ನನ್ನ ವೃತ್ತಿ ಬೆಸೆಯಬೇಡಿ

Public TV
2 Min Read
archanagautamm

ನವದೆಹಲಿ: ನಟಿ, ಮಾಡೆಲ್ ಅರ್ಚನಾ ಗೌತಮ್ ಅವರು ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್‍ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬಿಕಿನಿ ಹುಡುಗಿ ಚುನಾವಣೆಯಲ್ಲಿ ಭಾಗವಹಿಸುತ್ತಾರೆ ಎನ್ನುವ ವ್ಯಂಗ್ಯಾತ್ಮಕ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

archanagautamm 2

ಚುನಾವಣಾ ಅಭ್ಯರ್ಥಿ ಎಂದು ಸುದ್ದಿಯಾದಾಗಿನಿಂದಲೂ ಮಿಸ್ ಬಿಕಿನಿ ಇಂಡಿಯಾ ವಿಜೇತೆಯಾಗಿದ್ದ ಅರ್ಚನಾ ಗೌತಮ್ ಅವರ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನನ್ನ ಎರಡು ಪ್ರೋಪೆಷನ್‌  ಪರಸ್ಪರ ಬೆಸೆಯಬೇಡಿ ಎಂದು ಅರ್ಚನಾ ಗೌತಮ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿಗೆ ಅಮೂಲ್ಯ ಮನೆಗೆ ಗಂಗೆ, ದ್ರೌಪದಿ ಆಗಮನ

archanagautamm 1

ಈ ವಿಚಾರವಾಗಿ ಮಾತನಾಡಿದ ಅರ್ಚನಾ ಗೌತಮ್, ನಾನು ಮಿಸ್ ಬಿಕಿನಿ ಸ್ಪರ್ಧೆಯಲ್ಲಿ 2018ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ. ನಾನು 2014ರಲ್ಲಿ ಮಿಸ್ ಉತ್ತರ ಪ್ರದೇಶ ಮತ್ತು 2018ರಲ್ಲಿ ಮಿಸ್ ಕಾಸ್ಮೊ ವರ್ಲ್ಡ್ ಆಗಿದ್ದೆ. ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ನನ್ನ ವೃತ್ತಿಯನ್ನು ಒಂದೇ ಎಂದು ನೋಡಬೇಡಿ ಎಂದು ನಾನು ಜನರನ್ನು ವಿನಂತಿಸುತ್ತೇನೆ ಎಂದಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯ 125 ಅಭ್ಯರ್ಥಿಗಳಲ್ಲಿ ಅರ್ಚನಾ ಅವರ ಹೆಸರನ್ನು ಘೋಷಿಸಿದ ಕೂಡಲೇ, ಬಿಕಿನಿ ಧರಿಸಿರುವ ಅವರ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಪ್ರಾರಂಭಿಸಿದವು. ಈ ಹಿನ್ನೆಲೆಯಲ್ಲಿ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅರ್ಚನಾ, ಜನರು ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ಮಾಡೆಲಿಂಗ್ ವೃತ್ತಿಯನ್ನು ಬೆರೆಸಬಾರದು ಎಂದು ಹೇಳಿದ್ದಾರೆ.

2018ರಲ್ಲಿ ಮಿಸ್ ಉತ್ತರ ಪ್ರದೇಶ ಪ್ರಶಸ್ತಿ ವಿಜೇತೆಯಾಗಿರುವ ಅರ್ಚನಾ 2015ರಲ್ಲಿ ಗ್ರೇಟ್ ಗ್ರ್ಯಾಂಡ್ ಮಸ್ತಿ ಚಿತ್ರದ ಮೂಲಕ ಬಾಲಿವುಡ್‍ಗೆ ಪಾದಾರ್ಪಣೆ ಮಾಡಿದ್ದರು. ಅರ್ಚನಾ ಗೌತಮ್ ಮಿಸ್ ಬಿಕಿನಿ ಇಂಡಿಯಾ 2018 ಪ್ರಶಸ್ತಿಯನ್ನು ಗೆದ್ದಿದ್ದಾರೆ ಮತ್ತು ಮಿಸ್ ಕಾಸ್ಮೋಸ್ ವರ್ಲ್ಡ್ 2018ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಮೋಸ್ಟ್ ಟ್ಯಾಲೆಂಟ್ 2018 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *