ಧಾರವಾಡ: ವಿದ್ಯಾಕಾಶಿಯ ಸುಂದರಿ ಮಿಸ್ ಧಾರವಾಡ (Dharwad) ವರ್ಷಿಣಿ ರಾಮಡಗಿ(Varshini Ramadagi) ಈಗ ಮಿಸ್ ಊರ್ವಶಿ(Miss Urvashi) ಎನ್ನುವ ಅತ್ಯಾಕರ್ಷಕ ಕಿರೀಟ ಧರಿಸುವುದರೊಂದಿಗೆ ದೇಶದ ನವ ಸುಂದರಿಯ ಪಟ್ಟ ಅಲಂಕರಿದ್ದಾರೆ.
Advertisement
ಈಗಷ್ಟೇ 20 ಈ ನವತರುಣಿಯಾಗಿರುವ ವರ್ಷಿಣಿ(Varshini), ಧಾರವಾಡದ ಕೆಸಿಡಿ ಕಾಲೇಜ್‍ನಲ್ಲಿ ಟ್ರಾವೆಲ್ ಆ್ಯಂಡ್ ಟೂರಿಸಂ ಕೋರ್ಸ್‍ನಲ್ಲಿ(Travel and Tourism Course) 2ನೇ ವರ್ಷದಲ್ಲಿ ಓದುತ್ತಿದ್ದಾರೆ. ಇತ್ತೀಚೆಗೆ ಜೈಪುರದಲ್ಲಿ(Jaipura) ಮಿಸ್ ಇಂಟರ್ ಕ್ವಾಂಟಿನೇಂಟಲ್ ಹಾಗೂ ಎಲೀಟ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ (Beauty Pageants) ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅಲ್ಲದೇ ಅಲ್ಲಿ ವಿನ್ನರ್ ಆಗಿ ಹೊರಹೊಮ್ಮುವ ಮೂಲಕ ಮಿಸ್ ಊರ್ವಶಿ ಕಿರೀಟವನ್ನು(Crown) ಮುಡಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಸೀಟ್ ಬೆಲ್ಟ್ ಕಡ್ಡಾಯ – ಧರಿಸದಿದ್ದರೆ 1,000ರೂ. ದಂಡ
Advertisement
Advertisement
ಇತ್ತೀಚೆಗೆ ಕರ್ನಾಟಕದಲ್ಲಿ ಆಡಿಷನ್(Audition) ನಡೆಸಿ ಕರ್ನಾಟಕದಿಂದ ವರ್ಷಿಣಿ ಈ ಸೌಂದರ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಒಟ್ಟು 25 ರಾಜ್ಯಗಳಿಂದ 18 ರಿಂದ 25 ವರ್ಷದೊಳಗಿನ 25 ಮಾಡೆಲ್‍ಗಳು(Models) ಈ ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಮಿಸ್ ಊರ್ವಶಿ ಕಿರೀಟವನ್ನು ಕರ್ನಾಟಕಕ್ಕೆ(Karnataka) ತಂದು ಕೊಡುವುದರ ಜೊತೆಗೆ ಮುಂದೆ ನಡೆಯುವ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ(International Computation) ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇದನ್ನೂ ಓದಿ: 5.47 ಕೋಟಿ ಮೌಲ್ಯದ 2.43 ಲಕ್ಷ ಎಣ್ಣೆ ಬಾಟ್ಲಿಗಳ ಮೇಲೆ ಹರಿಯಿತು ರೋಡ್ ರೋಲರ್!
Advertisement
ವಿದ್ಯಾಭ್ಯಾಸದ ಜೊತೆಗೆ ಸೌಂದರ್ಯ ಸ್ಪರ್ಧೆಯಲ್ಲಿ ಮೊದಲಿನಿಂದಲೂ ತನ್ನ ಪ್ರತಿಭೆ ತೋರಿಸುವಲ್ಲಿ ಪರಿಣಿತರಾಗಿರುವ ವರ್ಷಿಣಿ ಈಗಾಗಲೇ ಎರಡು ಸಲ ಮಿಸ್ ಧಾರವಾಡ ಆಗಿ ಹೊರಹೊಮ್ಮಿದ್ದಾರೆ. ಅಲ್ಲದೇ ಧಾರವಾಡ ಗ್ಲ್ಯಾಮ್ ಬ್ಯೂಟಿ ಆಗಿಯೂ ವಿಜೇತರಾಗಿದ್ದರು. 2019ರಲ್ಲಿ ಮಿಸ್ ಕರ್ನಾಟಕ ಫೈನಲಿಸ್ಟ್ ಆಗಿದ್ದರು. ಸದ್ಯ ಈ ಕಿರೀಟ ಗೆದ್ದ ನಂತರ ಸಂತಸ ವ್ಯಕ್ತಪಡಿಸಿದ ವರ್ಷಿಣಿ, ಮುಂದೆ ಯಾವುದೇ ಸೌಂದರ್ಯ ಸ್ಪರ್ಧೆ ಇದ್ದರೆ ಭಾಗವಹಿಸಿ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.