21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್

Public TV
2 Min Read
s harnaaz sandhu

ನವದೆಹಹಲಿ: ಪಂಜಾಬ್ ಮೂಲದ ಹರ್ನಾಜ್ ಕೌರ್ ಸಂಧು ಅವರು 70ನೇ ಮಿಸ್ ಯೂನಿವರ್ಸ್ (ವಿಶ್ವ ಸುಂದರಿ) ಪಟ್ಟ ಒಲಿಸಿಕೊಂಡಿದ್ದಾರೆ. ಪರುಗ್ವೆಯ ನಾಡಿಯಾ ಫೆರೇರಾ ಮೊದಲ ರನ್ನರ್ ಅಪ್, ದಕ್ಷಿಣ ಆಫ್ರಿಕಾದ ಲಲೆಲಾ ಮಸ್ವಾನೆ ಎರಡನೇ ರನ್ನರ್ ಅಪ್ ಎಂದು ಘೋಷಿಸಲಾಗಿದೆ.

ಕೊನೆಯ ಬಾರಿ 2000ನೇ ಇಸವಿಯಲ್ಲಿ ಬಾಲಿವುಡ್ ನಟಿ ಲಾರಾ ದತ್ತ, 1994 ಸುಶ್ಮಿತಾ ಸೇನ್ ಅವರಿಗೆ ಮಿಸ್ ಯೂನಿವರ್ಸ್ ಪಟ್ಟ ಒಲಿದಿತ್ತು. ಬರೋಬ್ಬರಿ 21 ವರ್ಷಗಳ ನಂತರ ಭಾರತಕ್ಕೆ ವಿಶ್ವ ಸುಂದರಿ ಪಟ್ಟ ದೊರೆತಿದೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್‍ಗೆ 71ನೇ ಹುಟ್ಟುಹಬ್ಬದ ಸಂಭ್ರಮ

ಇಸ್ರೇಲ್‍ನ ಐಲಾಟ್‍ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಹರ್ನಾಜ್ ಕೌರ್ ಸಂಧು ವಿಶ್ವ ಸುಂದರಿ ಪಟ್ಟದ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೆಕ್ಸಿಕೋ ದೇಶದ 2020ರ ಮಾಜಿ ಭುವನ ಸುಂದರಿ ಆಂಡ್ರಿಯಾ ಮೆಜಾ ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಸಂಧು ಅವರಿಗೆ ಕಿರೀಟ ತೊಡಿಸಿದರು. ಜಾಗತಿಕ ಮಟ್ಟದಲ್ಲಿ ಕಾರ್ಯಕ್ರಮದ ನೇರ ಪ್ರಸಾರವಾಗಿದೆ. 21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವ ಸುಂದರಿ ಪಟ್ಟ ಬಂದಿದೆ. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ

ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರು ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಟಾಪ್ ಮೂರು ಸುತ್ತುಗಳಲ್ಲಿ ಸ್ಪರ್ಧಿಗಳಿಗೆ ಇಂದಿನ ಮಹಿಳೆಯರು ಎದುರಿಸುತ್ತಿರುವ ಒತ್ತಡಗಳನ್ನು ಹೇಗೆ ನಿಭಾಯಿಸಬಹುದು ಎಂದು ನೀವು ಹೇಳುತ್ತೀರಿ ಎಂದು ಕೇಳಿದ್ದರು.

miss universe

ಈ ಪ್ರಶ್ನೆಗೆ ಉತ್ತರಿಸಿದ ಭಾರತದ ಹರ್ನಾಸ್ ಸಂಧು, ಇಂದಿನ ಯುವಜನತೆ ಎದುರಿಸುತ್ತಿರುವ ದೊಡ್ಡ ಒತ್ತಡವೆಂದರೆ ತಮ್ಮಲ್ಲಿ ನಂಬಿಕೆ ಇಡಬೇಕಾಗಿರುವುದಾಗಿದೆ. ನೀವು ವಿಶಿಷ್ಟರು ಎಂದು ಭಾವಿಸಿಕೊಂಡರೆ ನಿಮ್ಮ ಬದುಕು ಸುಂದರವಾಗುತ್ತದೆ. ನಿಮ್ಮನ್ನು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿ, ಪ್ರಪಂಚದಾದ್ಯಂತ ನಡೆಯುತ್ತಿರುವ ಹೆಚ್ಚು ಮುಖ್ಯವಾದ ವಿಷಯಗಳ ಬಗ್ಗೆ ಮಾತನಾಡೋಣ. ಮನೆಯಿಂದ ಆಚೆ ಬನ್ನಿ, ನಿಮ್ಮ ಬಗ್ಗೆ ಯೋಚನೆ ಮಾಡಿ, ನಿಮ್ಮ ಜೀವನಕ್ಕೆ ನೀವೇ ನಾಯಕರು, ನಿಮಗೆ ನೀವೇ ಧ್ವನಿಯಾಗಬೇಕು. ನಾನು ನನ್ನ ಮೇಲೆ ನಂಬಿಕೆ ಇಟ್ಟಿರುವುದರಿಂದ ಇಂದು ಇಲ್ಲಿ ನಿಂತಿದ್ದೇನೆ ಎಂದು ಹೇಳಿದರು.

ವೃತ್ತಿಯಲ್ಲಿ ಮಾಡೆಲ್ ಆಗಿರುವ ಹರ್ನಾಜ್ ಪಂಜಾಬ್‍ನ ಚಂಡೀಗಢದಿಂದ ಬಂದವರು. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಚಂಡೀಗಢದ ಶಿವಾಲಿಕ್ ಪಬ್ಲಿಕ್ ಸ್ಕೂಲ್‍ನಲ್ಲಿ ಮಾಡಿದರು. ಚಂಡೀಗಢದಲ್ಲಿಯೇ ಪದವಿ ಪಡೆದ ನಂತರ, ಹರ್ನಾಜ್ ಪ್ರಸ್ತುತ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದಾರೆ. 2017ರಲ್ಲಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ತಮ್ಮ ಮೊದಲ ಬಾರಿಗೆ ಪ್ರದರ್ಶನವನ್ನು ನೀಡಿದರು. ಅಂದಿನಿಂದ ಅವರ ಮಾಡೆಲಿಂಗ್ ಪಯಣ ಆರಂಭವಾಯಿತು. ಸಂಧುಗೆ ಕುದುರೆ ಸವಾರಿ, ಈಜು ಮತ್ತು ಪ್ರವಾಸ ತುಂಬಾ ಇಷ್ಟ ಎಂದು ತಿಳಿದು ಬಂದಿದೆ.

Share This Article