Monday, 16th July 2018

Recent News

ವಿಶ್ವಸುಂದರಿ ಮಾನುಷಿಯ ಖಡಕ್ ಪ್ರಶ್ನೆಗೆ ಕೊಹ್ಲಿ ಮನದಾಳದ ಉತ್ತರ ನೀಡಿದ್ದು ಹೀಗೆ

ನವದೆಹಲಿ: ಚೀನಾದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ 17 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ ಜಯಿಸಿಕೊಟ್ಟ ಮಾನುಷಿ ಚಿಲ್ಲರ್ ಮತ್ತು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದೆಹಲಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಆ ಕಾರ್ಯಕ್ರಮದಲ್ಲಿ ಮಾನುಷಿ ಚಿಲ್ಲರ್ ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿಗೆ, ಇಂದು ನೀವು ವಿಶ್ವದ ಅತ್ಯುತ್ತಮ ಬ್ಯಾಟ್ಸ್ ಮನ್ ಆಗಿದ್ದೀರಿ. ನೀವು ಎಲ್ಲರಿಗೂ ಒಂದು ಸ್ಫೂರ್ತಿ ಆಗಿದ್ದೀರಿ ಹಾಗೂ ನಮ್ಮ ಸಮಾಜಕ್ಕಾಗಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದೀರಿ. ತುಂಬ ಜನರು ನಿಮ್ಮಿಂದ ಸ್ಫೂರ್ತಿ ಪಡೆಯುತ್ತಿದ್ದಾರೆ. ಹೀಗಾಗಿ ಕ್ರಿಕೆಟ್ ಜಗತ್ತಿನ ಮಕ್ಕಳಿಗೆ ನೀವು ಇದನ್ನು ಹೇಗೆ ಹಿಂತಿರುಗಿಸುತ್ತೀರಿ ಎಂದು ಪ್ರಶ್ನಿಸಿದರು.

ನಾವು ಯಾವಾಗ ಏನು ಮಾಡುತ್ತೇವೆ ಎನ್ನುವುದನ್ನು ವ್ಯಕ್ತಪಡಿಸುವುದು ಮುಖ್ಯ. ನಾವು ಪ್ರಾಮಾಣಿಕವಾಗಿ ಆ ಕೆಲಸವನ್ನು ಮಾಡಬೇಕು. ಅಷ್ಟೇ ಅಲ್ಲದೇ ಮುಕ್ತ ಮನಸ್ಸಿನಿಂದ ಮಾಡಬೇಕು. ಇಲ್ಲದಿದ್ದರೆ ಜನರು ನಾವು ನಟಿಸುತ್ತಿದ್ದೇವೆ ಎಂದು ತಿಳಿದುಕೊಳ್ಳುತ್ತಾರೆ. ನಾನು ಬೇರೆಯವರ ರೀತಿ ಇರಲು ಯಾವತ್ತೂ ಪ್ರಯತ್ನಿಸಿಲ್ಲ. ನಾನು ಯಾವಾಗಲೂ ನಾನಾಗಿಯೇ ಇರಲು ಪ್ರಯತ್ನಿಸುತ್ತೇನೆ. ನಾನು ಇರುವ ರೀತಿ ಹಾಗೂ ನಾನು ತೊಡಗುವ ರೀತಿ ಜನರಿಗೆ ಇಷ್ಟವಾಗುವುದಿಲ್ಲ ಎನ್ನುವುದು ನನಗೆ ತಿಳಿದಿದೆ. ಆದರೆ ಈ ವಿಚಾರಗಳು ನನಗೆ ಎಂದಿಗೂ ತೊಂದರೆಯಾಗಿಲ್ಲ. ಯಾವಾಗ ನಾನು ಬದಲಾಗಬೇಕು ಎಂದು ಅನಿಸುತ್ತದೋ ಆಗ ನಾನು ಆ ಸಮಯದಲ್ಲಿ ಬದಲಾಗಿದ್ದೇನೆ ಎಂದು ವಿರಾಟ್ ಕೊಹ್ಲಿ ದೀರ್ಘ ಉತ್ತರವನ್ನು ನೀಡಿದ್ದಾರೆ.

ನಾವು ಯಾವತ್ತೂ ನಮ್ಮ ಸ್ವಂತ ಅಸ್ತಿತ್ವವನ್ನು ಕಳೆದುಕೊಳ್ಳಬಾರದು. ಆಗ ನಾವು ಬೇರೆಯವರಿಗೆ ಸ್ಫೂರ್ತಿ ಆಗಲು ಸಾಧ್ಯವಿಲ್ಲ. ನಾವು ಯಾವತ್ತೂ ನಮ್ಮ ಗುರುತನ್ನು, ನಮ್ಮ ಪಾತ್ರವನ್ನು ಹಾಗೂ ವ್ಯಕ್ತಿತ್ವವನ್ನು ಕಳೆದುಕೊಳ್ಳಬಾರದು. ಯಾಕೆಂದರೆ ನೀವು ಬೇರೆಯವರ ರೀತಿ ಆಗಲೂ ಹೊರಟರೆ ನೀವು ಎಂದಿಗೂ ಯಶಸ್ಸು ಕಾಣುವುದಿಲ್ಲ ಹಾಗೂ ಬೇರೆಯವರಿಗೆ ಸ್ಫೂರ್ತಿ ಆಗಲು ಸಾಧ್ಯವಿಲ್ಲ ಎಂದು ಕೊಹ್ಲಿ ಮಾನುಷಿಗೆ ಉತ್ತರಿಸಿದ್ದಾರೆ.

Leave a Reply

Your email address will not be published. Required fields are marked *