ನಾಪತ್ತೆಯಾಗಿದ್ದ ಬಾಂಗ್ಲಾ ನಟಿ ಶವವಾಗಿ ಗೋಣಿಚೀಲದಲ್ಲಿ ಪತ್ತೆ

Public TV
1 Min Read
Raima Islam Shimu

ಢಾಕಾ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಅವರು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನಟಿ ರೈಮಾ ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದರು. ಆದರೆ ಕೆರಣಿಗಂಜ್‍ನ ಹಜರತ್‍ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಆಕೆಯ ಶವ ಪತ್ತೆಯಾಗಿದೆ. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಕೆರಣಿಗಂಜ್ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಗೋಣಿಚೀಲದಿಂದ ಹೊರತೆಗೆದಿದೆ.

Raima Islam Shimu 2

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ಇದನ್ನೂ ಓದಿ:  ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

Raima Islam Shimu 3

45 ವರ್ಷದ ರೈಮಾ 1998ರಲ್ಲಿ ಬರ್ತಮನ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಅವರು ಸುಮಾರು 25 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಬಾಂಗ್ಲಾದೇಶ ಚಲನಚಿತ್ರ ಕಲಾವಿದರ ಸಂಘದ ಸಹಾಯಕ ಸದಸ್ಯರಾಗಿದ್ದರು. ಸಿನಿಮಾದ ಜೊತೆಗೆ ಅವರು ಕೆಲವು ಕಿರುತೆರೆ ಧಾರವಾಹಿಗಳನ್ನು ನಿರ್ಮಿಸಿದ್ದರು ಹಾಗೂ ನಟಿಸಿದ್ದರು. ಇದನ್ನೂ ಓದಿ:  ಕೊರೊನಾ ಇನ್ನು ಮುಗಿದಿಲ್ಲ, ಮುಗಿಯುವ ಹಂತದಲ್ಲಿಯೂ ಇಲ್ಲ: WHO ಮುಖ್ಯಸ್ಥ

 

Share This Article
Leave a Comment

Leave a Reply

Your email address will not be published. Required fields are marked *