DistrictsKarnatakaKodaguLatestMain Post

ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ

ಮಡಿಕೇರಿ: ಕಳೆದ ನಾಲ್ಕು ದಿನಗಳ ಹಿಂದೆ ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದಾಗ ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ (Forest Guard) ಇಂದು ಶವವಾಗಿ ಪತ್ತೆಯಾಗಿದ್ದಾರೆ.

ಅರಣ್ಯ ರಕ್ಷಕ ತರುಣ್(23) ಮೃತ ದುರ್ದೈವಿ. ಅರಣ್ಯದಲ್ಲಿ ಬೀಟ್ ಹೋಗಿದ್ದ ಸಂದರ್ಭ ನಾಪತ್ತೆಯಾಗಿದ್ದ ತರುಣ್ ವಿ. ಬಾಡಗ ಗ್ರಾಮದ ಕೊಕ್ಕದಲ್ಲಿರುವ ನದಿಯಲ್ಲಿ (River) ಶವವಾಗಿ ಪತ್ತೆಯಾಗಿದ್ದಾರೆ.

ಕೊಡಗು (Kodagu) ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಅರಣ್ಯದಲ್ಲಿ ಸಹೋದ್ಯೋಗಿಗಳ ಬೀಟ್‌ಗೆ ಹೋಗಿರುವ ಸಂದರ್ಭದಲ್ಲಿ ಬರೋಪೋಳೆ ನದಿಯ ಸಮೀಪದಲ್ಲಿ ಕಾಲು ಜಾರಿ ಬಿದ್ದಿರುವ ಬಗ್ಗೆ ತರುಣ್ ಸಹೋದ್ಯೋಗಿಗಳು ಮಾಹಿತಿ ನೀಡಿದರು. ಇದನ್ನೂ ಓದಿ: ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ

ಈ ಹಿನ್ನೆಲೆಯಲ್ಲಿ ಎನ್.ಡಿಆರ್.ಎಫ್ ನುರಿತ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿ ಇಂದು ಮುಂಜಾನೆ ಮೃತದೇಹ ಹೊರ ತೆಗೆಯಲಾಯಿತು. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸೇತುವೆ ನೆಲಸಮ ಮಾಡುವಾಗ ನದಿಗೆ ಬಿದ್ದ ಜೆಸಿಬಿ- ಪ್ರಾಣಾಪಾಯದಿಂದ ಚಾಲಕ ಪಾರು

Live Tv

Leave a Reply

Your email address will not be published. Required fields are marked *

Back to top button