CrimeLatestMain PostNational

8 ವರ್ಷದ ಬಾಲಕಿ ಕತ್ತು ಸೀಳಿ ಹತ್ಯೆ – ನಗ್ನ ಸ್ಥಿತಿಯಲ್ಲಿ ಶವ ಪತ್ತೆ

ಜೈಪುರ: ಎಂಟು ವರ್ಷದ ಬಾಲಕಿ ಕತ್ತು ಸೀಳಿ ಹತ್ಯೆಗೈದಿರುವ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯ ಅಮೇರ್ ಪ್ರದೇಶದಲ್ಲಿ ನಡೆದಿದೆ.

ಶನಿವಾರ ಮಧ್ಯಾಹ್ನ ಬಾಲಕಿ ನಾಪತ್ತೆಯಾಗಿದ್ದು, ಬಳಿಕ ಆಕೆಯ ಬೆತ್ತಲೆ ಶವ ಬಾಲಕಿಯ ನಿವಾಸದ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನೆಚ್ಚಿನ ನಟ ಪವನ್ ಕಲ್ಯಾಣ್ ಭೇಟಿಗಾಗಿ 400 ಕಿ.ಮೀ ಪಾದಯಾತ್ರೆ!

ಈ ಘಟನೆ ಸಂಬಂಧಿಸಿದಂತೆ ಮಾತನಾಡಿದ ಜೈಪುರ ಉತ್ತರ ಹೆಚ್ಚುವರಿ ಡಿಸಿಪಿ ಸುಮನ್ ಚೌಧರಿ ಅವರು, ಬಾಲಕಿಗೆ ಸುಮಾರು 7ರಿಂದ 8 ವರ್ಷ ಎಂದು ಅಂದಾಜಿಸಲಾಗಿದ್ದು, ಆಕೆಯ ಕತ್ತು ಸೀಳಿ ದುಷ್ಕರ್ಮಿಗಳು ಅಮೇರ್ ಪ್ರದೇಶದಲ್ಲಿ ಕೊಲೆ ಮಾಡಿದ್ದಾರೆ. ಶನಿವಾರ ಮಧ್ಯಾಹ್ನದ ಬಳಿಕ ಬಾಲಕಿ ನಾಪತ್ತೆಯಾಗಿದ್ದು, ನಂತರ ಆಕೆಯ ಶವ ನಗ್ನ ಸ್ಥಿತಿಯಲ್ಲಿ ಮನೆಯ ಹತ್ತಿರ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರೀತಿಸಿ 4 ತಿಂಗಳ ಹಿಂದೆಯಷ್ಟೇ ಮದ್ವೆಯಾಗಿದ್ದ ಮಹಿಳಾ ಎಂಜಿನಿಯರ್ ಆತ್ಮಹತ್ಯೆ

Leave a Reply

Your email address will not be published.

Back to top button