ಲಕ್ನೋ: ವಿಶ್ವಕಪ್ (World Cup) ಟ್ರೋಫಿ ಮೇಲೆ ಕಾಲಿಟ್ಟಿದ್ದ ಅಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಮಿಚೆಲ್ ಮಾರ್ಷ್ (Mitchell Marsh) ವಿರುದ್ಧ ಉತ್ತರ ಪ್ರದೇಶದ ಆಲಿಗಢದಲ್ಲಿ ದೂರು ದಾಖಲಾಗಿದೆ.
ಆರ್‍ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ಅವರು ಮಿಚೆಲ್ ಮಾರ್ಷ್ ವಿರುದ್ಧ ದೂರು ದಾಖಲಿಸಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಮಿಚೆಲ್ ಮಾರ್ಷ್ ತಮ್ಮ ಕಾಲುಗಳನ್ನು ವಿಶ್ವಕಪ್ ಟ್ರೋಫಿ ಮೇಲೆ ಇಟ್ಟಿದ್ದರು. ಈ ಚಿತ್ರ ಕ್ರಿಕೆಟ್ ಅಭಿಮಾನಿಗಳ ಭಾವನೆಗೆ ಧಕ್ಕೆ ಉಂಟುಮಾಡಿದೆ ಎಂದು ಪಂಡಿತ್ ಕೇಶವ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಲೆಕ್ಕಕ್ಕಿಲ್ಲ ರಿಂಕು ಸಿಕ್ಸರ್ – ಕೊನೇ ಎಸೆತದಲ್ಲಿ 7 ರನ್ ಗಳಿಸಿದ್ರೂ ಭಾರತಕ್ಕೆ ಸಿಕ್ಕಿದ್ದು 1 ರನ್, ಏಕೆ ಗೊತ್ತೇ?
Advertisement
ನ.19 ರಂದು ಅಹಮದಾಬಾದ್‍ನ ನರೇಂದ್ರ ಮೋದಿ (Narendra Modi) ಸ್ಟೇಡಿಯಂನಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 6 ವಿಕೆಟ್‍ಗಳಿಂದ ಭಾರತ ತಂಡವನ್ನು ಮಣಿಸಿತ್ತು. ಈ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಸತತ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.
Advertisement
Advertisement
ಗೆಲುವಿನ ನಂತರ ಸಂಭ್ರಮ ಆಚರಿಸಿಕೊಂಡಿದ್ದ ಆಸೀಸ್ ಪಡೆ, ಚಿತ್ರಗಳನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಹಂಚಿಕೊಂಡಿತ್ತು. ಚಿತ್ರವೊಂದರಲ್ಲಿ ಮಿಚೆಲ್ ಮಾರ್ಷ್ ಟ್ರೋಫಿಯ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಕೆಲವರು ಮಿಚೆಲ್ ಪರವಾಗಿಯೂ ವಾದಿಸಿದ್ದರು.
Advertisement
ದೂರು ದಾಖಲಿಸಿರುವ ಪಂಡಿತ್ ಕೇಶವ್ ಒಂದು ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಳುಹಿಸಿಕೊಟ್ಟಿದ್ದಾರೆ. ಮಿಚೆಲ್ ಮಾರ್ಷ್ ಭಾರತದಲ್ಲಿ ಕ್ರಿಕೆಟ್ ಆಡುವುದನ್ನು ನಿಲ್ಲಿಸುವಂತೆ ನಿಷೇಧಿಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: T20 ಕದನಕ್ಕೆ ವಿಶ್ವಕಪ್ ದಾಖಲೆ ಉಡೀಸ್ – ಏಕಕಾಲಕ್ಕೆ ಕರ್ನಾಟಕದ ಜನಸಂಖ್ಯೆಗಿಂತಲೂ ಅಧಿಕ ಮಂದಿ ವೀಕ್ಷಣೆ