– ದೈತ್ಯ ಆಸೀಸ್ ತಂಡದಲ್ಲೀಗ `Five Star’ ಕೊರತೆ
ಕ್ಯಾನ್ಬೆರಾ: 2025ರ ಚಾಂಪಿಯನ್ಸ್ (Champions Trophy 2025) ಟ್ರೋಫಿ ಟೂರ್ನಿಗೆ ಇನ್ನೂ ಒಂದು ವಾರವಷ್ಟೇ ಬಾಕಿ ಉಳಿದಿದೆ. ಈ ಹೊತ್ತಿನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಬಹುದೊಡ್ಡ ಆಘಾತವಾಗಿದೆ.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಮಾರ್ಕಸ್ ಸ್ಟೋಯ್ನಿಸ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc) ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ಹೊತ್ತಲ್ಲೇ ಆಸೀಸ್‌ಗೆ ದೊಡ್ಡ ಆಘಾತ – ಏಕದಿನ ಕ್ರಿಕೆಟ್‌ಗೆ ಸ್ಟೋಯ್ನಿಸ್ ಗುಡ್‌ಬೈ
Advertisement
Advertisement
ಬಲಿಷ್ಠ ತಂಡದಲ್ಲಿ ಸ್ಟಾರ್‌ಗಳ ಕೊರತೆ:
2025ರ ಚಾಂಪಿಯನ್ಸ್ ಟ್ರೋಫಿಟೂರ್ನಿಗೆ 7 ದಿನಗಳು ಬಾಕಿಯಿದೆ. ಈಗಾಗಲೇ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins), ವೇಗಿ ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಮಾರ್ಷ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಅಲ್ಲದೇ ಏಕದಿನ ಕ್ರಿಕೆಟ್‌ಗೆ ಮಾರ್ಕಸ್ ಸ್ಟೋಯ್ನಿಸ್ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಬೆನ್ನಲ್ಲೇ ಮಿಚೆಲ್ ಸ್ಟಾರ್ಕ್ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದಾರೆ. ಇದು ಅಸ್ಟ್ರೇಲಿಯಾ ತಂಡಕ್ಕೆ ನುಂಗಲಾರದ ತುತ್ತಾಗಿದೆ. ಪ್ಯಾಟ್ ಕಮ್ಮಿನ್ಸ್ ಹೊರಬಿದ್ದ ಬೆನ್ನಲ್ಲೇ ಸ್ಟೀವ್ ಸ್ಮಿತ್‌ಗೆ ಚಾಂಪಿಯನ್ಸ್ ಟ್ರೋಫಿ ನಾಯಕತ್ವ ನೀಡಲಾಗಿದೆ. ಆದ್ರೆ ಮೂವರು ಸ್ಟಾರ್ ಬೌಲರ್ (ಸ್ಟಾರ್ಕ್, ಕಮ್ಮಿನ್ಸ್, ಹ್ಯಾಜಲ್‌ವುಡ್), ಆಲ್‌ರೌಂಡರ್ ಸ್ಟೋಯ್ನಿಸ್ ಹೊರಗುಳಿದಿರುವುದು ಆಸೀಸ್‌ಗೆ ಆಘಾತವಾಗಿದೆ. ಈ ಐವರಿ ಬದಲೀ ಆಟಗಾರರಾಗಿ ಯಾರನ್ನ ಆಯ್ಕೆ ಮಾಡಬೇಕೆಂಬುದು ಚಿಂತೆಯಾಗಿದೆ.
Advertisement
Advertisement
ಫೆ.19ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗುತ್ತಿದ್ದು, ಸ್ಟಾರ್ಕ್, ಕಮ್ಮಿನ್ಸ್, ಹ್ಯಾಜಲ್‌ವುಡ್ ಮೇಲೆ ಆಸೀಸ್ ಬಹುದೊಡ್ಡ ನಿರೀಕ್ಷೆ ಹೊಂದಿತ್ತು. ಆದ್ರೆ ಒಬ್ಬರಾದ ಮೇಲೆ ಒಬ್ಬರು ತಂಡದಿಂದ ಹೊರಗುಳಿಯುತ್ತಿರುವುದು ಕ್ರಿಕೆಟ್ ಲೋಕದಲ್ಲಿ ಚರ್ಚೆ ಹುಟ್ಟುಹಾಕಿದೆ. ಇದನ್ನೂ ಓದಿ:IND vs ENG, 2nd ODI: ರೋಹಿತ್ ಅಬ್ಬರದ ಶತಕ, ಜಡೇಜಾ ಸ್ಪಿನ್ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ
ಏಕದಿನ ಕ್ರಿಕೆಟ್‌ನಲ್ಲಿ ಸ್ಟೋಯ್ನಿಸ್ ಸಾಧನೆ:
2015ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಸ್ಟೋಯ್ನಿಸ್, ಈವರೆಗೂ 74 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ಅವಧಿಯಲ್ಲಿ 93.96 ಸ್ಟ್ರೈಕ್ ರೇಟ್‌ನಲ್ಲಿ 1,495 ರನ್ ಗಳಿಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ನಡೆದಿದ್ದ ಪಂದ್ಯದಲ್ಲಿ ಅಜೇಯ 146 ರನ್ ಗಳಿಸಿದ್ದು ಏಕದಿನ ಸ್ವರೂಪದಲ್ಲಿ ಅತ್ಯಧಿಕ ಸ್ಕೋರ್ ಆಗಿತ್ತು.
ಜೊತೆಗೆ 74 ಪಂದ್ಯಗಳಲ್ಲಿ 43.12 ಸರಾಸರಿಯಲ್ಲಿ 48 ವಿಕೆಟ್‌ಗಳನ್ನು ಪಡೆದಿದ್ದಾರೆ. 2024ರ ನವೆಂಬರ್ 10ರಂದು ಪರ್ತ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ಕೊನೆಯ ಏಕದಿನ ಪಂದ್ಯವನ್ನಾಡಿದ್ದರು. 2019ರಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ನೀಡುವ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.