ರಜನಿಕಾಂತ್ ನಟನೆಯ ಲಾಲ್ ಸಲಾಂ ಸಿನಿಮಾ ನಿನ್ನೆಯಷ್ಟೇ ರಿಲೀಸ್ ಆಗಿದೆ. ಸಿನಿಮಾದಲ್ಲಿ ರಜನಿ ಸಖತ್ ಸ್ಟೈಲೀಶ್ ಆಗಿ ಕಂಡಿದ್ದಾರೆ. ಖಡಕ್ ಡೈಲಾಗ್ ಹೊಡೆದಿದ್ದಾರೆ. ರಜನಿ ಅಭಿಮಾನಿಗಳಿಗೆ ಏನೆಲ್ಲ ಬೇಕೊ ಎಲ್ಲವನ್ನೂ ಕೊಟ್ಟಿದ್ದಾರೆ. ಆದರೆ, ಅಂದುಕೊಂಡಷ್ಟು ಚಿತ್ರಕ್ಕೆ ಮೊದಲ ದಿನ ಪ್ರತಿಕ್ರಿಯೆ ನೀಡಿಲ್ಲ. ಮೊದಲ ದಿನ ಗಳಿಕೆ (Box Office) ನಾಲ್ಕುವರೆ ಕೋಟಿ ಎಂದು ಅಂದಾಜಿಸಲಾಗಿದೆ.
‘ಜೈಲರ್’ ಅಭೂತಪೂರ್ವ ಯಶಸ್ಸಿನ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಲಾಂ’ (Lal Salaam) ರಿಲೀಸ್ ಆಗುತ್ತಿರುವುದಕ್ಕೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರವನ್ನು ರಜನಿ ಪುತ್ರಿ ಐಶ್ವರ್ಯ ರಜನಿಕಾಂತ್ (Aishwarya Rajinikanth) ನಿರ್ದೇಶಿಸಿದ್ದಾರೆ. ಸ್ಪೋರ್ಟ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ವಿಘ್ನೇಶ್, ಲಿವಿಂಗ್ಸ್ಟನ್, ಸೆಂಥಿಲ್, ಜೀವಿತಾ, ಕೆ.ಎಸ್. ರವಿಕುಮಾರ್ ಮತ್ತು ತಂಬಿ ರಾಮಯ್ಯ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.
ರಜನಿಕಾಂತ್ ಅವರು ಮೊಯ್ದೀನ್ ಭಾಯ್ ಎಂಬ ಪವರ್ಫುಲ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಲಾಲ್ ಸಲಾಂ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಗೆ ಮಾಂತ್ರಿಕ ಎ. ಆರ್. ರೆಹಮಾನ್ ಸಂಗೀತ ಸಂಯೋಜನೆ, ವಿಷ್ಣು ರಂಗಸಾಮಿ ಛಾಯಾಗ್ರಹಣ ಮತ್ತು ಬಿ. ಪ್ರವೀಣ್ ಭಾಸ್ಕರ್ ಸಂಕಲನ ಒಳಗೊಂಡಿದೆ.
ಲಾಲ್ ಸಲಾಂ ಚಿತ್ರವನ್ನು ಕಾಲಿವುಡ್ನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ನ ಸುಭಾಸ್ಕರನ್ ನಿರ್ಮಿಸಿದ್ದು, ತಮಿಳುನಾಡಿನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವ ಹಕ್ಕನ್ನು ರೆಡ್ ಜೈಂಟ್ ಸಂಸ್ಥೆ ಪಡೆದುಕೊಂಡಿದೆ. ಕನ್ನಡ, ತೆಲುಗು, ಹಿಂದಿ ಜತೆಗೆ ಮಲಯಾಳಂನಲ್ಲಿಯೂ ಈ ಸಿನಿಮಾ ಬಿಡುಗಡೆ ಆಗಿದೆ. ಅಂದಹಾಗೇ ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಇದು 3ನೇ ಸಿನಿಮಾ.