ಐಜ್ವಾಲ್: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯ ಪೈಕಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈಗ ಎಲ್ಲರ ಕಣ್ಣು ಮಿಜೋರಾಂ ಮೇಲೆ ನೆಟ್ಟಿದೆ. ಸೋಮವಾರ (ಡಿ.4) ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ.
ರಾಜ್ಯಾದ್ಯಂತ 13 ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ಭಾನುವಾರ (ಡಿ.2) ಮಿಜೋರಾಂ ಜನರಿಗೆ ಪ್ರಮುಖ ಹಬ್ಬದ ದಿನವಿದ್ದ ಕಾರಣ ಮತ ಎಣಿಕೆ ಕಾರ್ಯವನ್ನು ಒಂದು ದಿನ ಮುಂದೂಡಲಾಗಿತ್ತು. ಇದನ್ನೂ ಓದಿ: ಸಿದ್ಧಾಂತದ ಕದನ ಮುಂದುವರಿಯುತ್ತದೆ: 3 ರಾಜ್ಯಗಳಲ್ಲಿ ಸೋಲಿನ ಬಳಿಕ ರಾಹುಲ್ ಪ್ರತಿಕ್ರಿಯೆ
ಮಿಜೋರಾಂನ 40 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 8 ರಂದು ನಡೆದಿದ್ದ ಚುನಾವಣೆಯಲ್ಲಿ 80.43% ಮತದಾನವಾಗಿದೆ. 79.61% ಪುರುಷರು, 81.21% ಮಹಿಳೆಯರು ಮತ ಚಲಾಯಿಸಿದ್ದಾರೆ. 2018ರ ಚುನಾವಣೆಯಲ್ಲಿ 81.61% ನಷ್ಟು ಮತ ಚಲಾಯಿಸಿದ್ದರು. 8.57 ಲಕ್ಷ ಮತದಾರರನ್ನು ಒಳಗೊಂಡಿರುವ ಈ ರಾಜ್ಯದಲ್ಲಿ ಸ್ಥಳೀಯ ಪಕ್ಷಗಳಾದ ಮಿಜೋ ನ್ಯಾಷನಲ್ ಫ್ರಂಟ್ (MNF), ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ನಡುವೆ ಪೈಪೋಟಿ ನಡೆದಿದೆ. ಇನ್ನೂ ಕಾಂಗ್ರೆಸ್, ಬಿಜೆಪಿ ಈ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವುದು ಕಷ್ಟ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಆದ್ರೆ ಸ್ಥಳೀಯ ಪಕ್ಷಗಳೊಂದಿಗೆ ಕಾಂಗ್ರೆಸ್ ಸಹ ಪೈಪೋಟಿಯಲ್ಲಿರುವುದಾಗಿ ಸ್ಥಳೀಯ ನಾಯಕರು ತಿಳಿಸಿದ್ದಾರೆ. 12 ರಾಜ್ಯಗಳಲ್ಲಿ ಬಿಜೆಪಿ ಆಡಳಿತ – 3 ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರ
ಮಿಜೋರಾಂನ 40 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ. ಈಗಾಗಲೇ 4 ರಾಜ್ಯಗಳ ಪೈಕಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮಿಜೋರಂನಲ್ಲಿ ಯಾರ ಪ್ರಭಾವ ಎಷ್ಟಿದೆ ಎನ್ನೋದು ಫಲಿತಾಂಶದ ನಂತರ ತಿಳಿಯಲಿದೆ. ಇದನ್ನೂ ಓದಿ: 3 ರಾಜ್ಯಗಳಲ್ಲಿ ಮೋದಿ ಪಡೆಗೆ ಭರ್ಜರಿ ಗೆಲುವು – ಗ್ಯಾರಂಟಿಯಿಂದಲೇ ತೆಲಂಗಾಣದಲ್ಲಿ ಗೆದ್ದ ಕಾಂಗ್ರೆಸ್