ಚೆನ್ನೈ: ಚೆನ್ನೈನಲ್ಲಿ ನಡೆದ ಡಿಎಂಕೆ (DMK) ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಇಂದು ಡಿಎಂಕೆ ಮುಖಂಡ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (Tamil Nadu Chief Minister M K Stalin) ಅವರನ್ನು ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಹೊಸದಾಗಿ ರಚನೆಯಾದ ಜನರಲ್ ಕೌನ್ಸಿಲ್‍ನಲ್ಲಿ, ಪಕ್ಷದ ಉನ್ನತ ಹುದ್ದೆಗೆ ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಡಿಎಂಕೆ ಘೋಷಣೆ ಮಾಡಿದೆ. ಪ್ರಧಾನ ಕಾರ್ಯದರ್ಶಿ ಪಕ್ಷದ ಹಿರಿಯ ನಾಯಕರಾದ ದುರೈಮುರುಗನ್ (Duraimurugan) ಮತ್ತು ಖಜಾಂಚಿಯಾಗಿ ಟಿ.ಆರ್. ಬಾಲು (T R Baalu) ಅವಿರೋಧವಾಗಿ ಆಯ್ಕೆಯಾದರು. ಈ ಮೂವರು ನಾಯಕರು ಕೂಡ ಎರಡನೇ ಬಾರಿಗೆ ತಮ್ಮ ತಮ್ಮ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಕಾಂಡೋಮ್‍ಗಳನ್ನು ಹೆಚ್ಚಾಗಿ ಬಳಸ್ತಿರೋದು ನಾವು – ಭಾಗವತ್‍ಗೆ ಓವೈಸಿ ತಿರುಗೇಟು
Advertisement
Advertisement
ಪಕ್ಷದ ಸಾಮಾನ್ಯ ಮಂಡಳಿ ಸಭೆಗೆ ಆಗಮಿಸಿದ ಸ್ಟಾಲಿನ್ ಅವರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಡಿಎಂಕೆಯ 15ನೇ ಸಾಂಸ್ಥಿಕ ಚುನಾವಣೆಯ ಭಾಗವಾಗಿ, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿಗಳನ್ನು ರಾಜ್ಯಾದ್ಯಂತ ವಿವಿಧ ಹಂತಗಳಲ್ಲಿ ಪಕ್ಷದ ಹುದ್ದೆಗಳಿಗೆ ನಡೆದ ಚುನಾವಣೆಯ ನಂತರ ಆಯ್ಕೆ ಮಾಡಲಾಯಿತು. ಇದನ್ನೂ ಓದಿ: ಮೇಲುಕೋಟೆಯ ರಾಜಗೋಪುರದಲ್ಲಿ ಬಾರ್ ಸೆಟ್ – ನಾಗಚೈತನ್ಯ ಚಿತ್ರ ತಂಡದಿಂದ ಎಡವಟ್ಟು