– ವರದಿ ಜಾರಿಯಾದ್ರೆ ಉಗ್ರ ಹೋರಾಟ; ಸರ್ಕಾರಕ್ಕೆ ಎಚ್ಚರಿಕೆ
ಬೆಂಗಳೂರು: ಜಾತಿ ಜನಗಣತಿ (Caste Census) ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಸಿಎಂ ನನಗೆ ಜಾತಿ ಜನಗಣತಿ ಮಾಡಲು ಅಧಿಕಾರ ಇದೆ ಎಂದು ಹೇಳಲಿ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ ಎಂದು ಎ. ಮಂಜು (A Manju) ಸವಾಲ್ ಹಾಕಿದ್ದಾರೆ.
ಜಾತಿ ಜನಗಣತಿ ವಿಚಾರವಾಗಿ ʻಪಬ್ಲಿಕ್ ಟಿವಿʼ ಜೊತೆಗೆ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಜಾತಿ ಜನಗಣತಿ ಅಲ್ಲ ಇದು.. ಇವರಿಗೆ ಜಾತಿ ಜನಗಣತಿ ಮಾಡಲು ಅಧಿಕಾರ ಇಲ್ಲ. ಸಿಎಂ ನನಗೆ ಜಾತಿ ಜನಗಣತಿ ಮಾಡಲು ಅಧಿಕಾರ ಇದೆ ಎಂದು ಹೇಳಲಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಡ್ರೆಸ್ಸಿಂಗ್ ರೂಮ್ ಮಾಹಿತಿ ಲೀಕ್ – ಗಂಭೀರ್ ಆಪ್ತ ಸೇರಿ ನಾಲ್ವರು ಕೋಚಿಂಗ್ ಸಿಬ್ಬಂದಿಯನ್ನ ಕಿತ್ತೆಸೆದ ಬಿಸಿಸಿಐ
ಈ ಸರ್ಕಾರಕ್ಕೆ ಜಾತಿ ಜನಗಣತಿ ಮಾಡಲು ಅಧಿಕಾರ ಕೊಟ್ಟವರು ಯಾರು? ಜಾತಿ ಜನಗಣತಿ ಮಾಡಬೇಕಿದ್ದು ಕೇಂದ್ರ ಸರ್ಕಾರ. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ. ಇಂತಹ ಸಮೀಕ್ಷೆಯಲ್ಲಿ ಜಾತಿಗಣತಿ ಯಾಕೆ ಮಾಡಿದ್ದು ಯಾಕೆ? ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇರೋದಕ್ಕೆ ಇವೆಲ್ಲ ಮಾಡ್ತಿದ್ದಾರೆ. ಕುರ್ಚಿ ಕಿತ್ತಾಟ ಮರೆ ಮಾಚೋಕೆ ಇದೆಲ್ಲ ಮಾಡ್ತಿದ್ದಾರೆ. ಇದು ಸರಿಯಲ್ಲ, ಈ ಜಾತಿ ಜನಗಣತಿ ವರದಿ ಅಂಗೀಕಾರ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಎಫೆಕ್ಟ್; ಕಾರಿನ ಮೇಲೆ ಬಿದ್ದ ಮರದ ಕೊಂಬೆ – ಬೈಕ್ ಸವಾರ ಜಸ್ಟ್ ಮಿಸ್
ಈ ಜಾತಿ ಜನಗಣತಿ ವಿರುದ್ಧ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಎಲ್ಲಾ ಒಕ್ಕಲಿಗ ಶಾಸಕರು ಪಕ್ಷಾತೀತವಾಗಿ ಧ್ವನಿ ಎತ್ತಬೇಕು. ನಮ್ಮ ಸಮುದಾಯಕ್ಕೆ ಅನ್ಯಾಯ ಆದ್ರೆ ನಾವು ಸಹಿಸಲ್ಲ. ನನಗೆ ಸಮುದಾಯದ ಮುಖ್ಯ, ಶಾಸಕ ಸ್ಥಾನ ಮುಖ್ಯ ಅಲ್ಲ. ಸಮುದಾಯಕ್ಕಾಗಿ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡೋಕೆ ಸಿದ್ಧ ಎಂದು ಹೇಳಿದ್ದಾರೆ. ಇದನ್ನೂ ಓದಿ: UK | ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ 123ನೇ ಅಧ್ಯಕ್ಷರಾಗಿ ಭಾರತೀಯ ಮೂಲದ ಮುಮ್ತಾಜ್ ಆಯ್ಕೆ
ನನ್ನ ಮನೆಗೆ ಬಂದು ಸಮೀಕ್ಷೆಯೇ ಮಾಡಿಲ್ಲ. ಇದಕ್ಕೇನು ಹೇಳೋದು? ಜಯಪ್ರಕಾಶ್ ಹೆಗ್ಡೆ ಇದನ್ನ ಜಾತಿ ಸಮೀಕ್ಷೆ ಅಂತ ಹೇಳಲಿ ನೋಡೋಣ. ಡಿಕೆ ಶಿವಕುಮಾರ್ ಸಮುದಾಯಕ್ಕೆ ಅನ್ಯಾಯ ಮಾಡಲು ಬಿಡಬಾರದು. ಇವತ್ತಿನ ಕ್ಯಾಬಿನೆಟ್‌ನಲ್ಲಿ ಇದನ್ನ ಅಂಗೀಕಾರ ಮಾಡಿದ್ರೆ ಉಗ್ರ ಹೋರಾಟ ಮಾಡ್ತೀವಿ. ಸರ್ಕಾರಕ್ಕೆ ಶಾಸಕ ಎ ಮಂಜು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರದಿಂದ ರೂಲ್ಸ್ – ಪೋಷಕರ ಸಂದರ್ಶನ, ಮನಸೋ ಇಚ್ಛೆ ಫೀಸ್‌ಗೆ ಬ್ರೇಕ್