ಬೆಂಗಳೂರು: ಬಳ್ಳಾರಿಯ ವಿಜಯನಗರದ ಶಾಸಕ ಆನಂದ್ ಸಿಂಗ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ಸದನದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಈಗ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ವಾಂತಿ ಹಾಗೂ ಎದೆ ನೋವು ಕಾಣಿಸಿಕೊಂಡಿದ್ದರಿಂದ ಶಾಸಕ ಆನಂದ್ ಬುಧವಾರ ಎರಡನೇ ಬಾರಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಅವರು ಆಸ್ಪತ್ರೆಯಿಂದ ಡಿಸ್ಚರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇಂದು ರೆಸ್ಟ್ ಮಾಡಿ ಶುಕ್ರವಾರ ಬಜೆಟ್ ಮಂಡನೆಯ ವೇಳೆ ಸದನದಲ್ಲಿ ಹಾಜರಿ ಇರುವುದಾಗಿ ಆನಂದ್ ಸಿಂಗ್ ತಿಳಿಸಿದ್ದಾರೆ.
ಮಂಗಳವಾರ ನಡೆದ ಅಧಿವೇಶನದಲ್ಲಿ ಆನಂದ್ ಸಿಂಗ್ ಕಪ್ಪು ಬಣ್ಣದ ಗ್ಲಾಸ್ ಧರಿಸಿ ಹಾಜರಾಗಿದ್ದರು. ಕಲಾಪಕ್ಕೆ ಹಾಜರಾಗಿ ಓಡಾಟ ಹೆಚ್ಚಾಗಿದ್ದರಿಂದ ಅವರಿಗೆ ವಾಂತಿ ಹಾಗೂ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಅವರು ವೈದ್ಯರ ಸಲಹೆ ಮೇರೆಗೆ ಮತ್ತೆ ಅಪೋಲೋ ಆಸ್ಪತ್ರೆಗೆ ಅಡ್ಮಿಟ್ ಆಗಿ ಓಪಿಡಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.
ಆನಂದ್ ಸಿಂಗ್ ಅವರ ಪಕ್ಕೆಲುಬು ಮುರಿದಿದ್ದರಿಂದ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಆದರೆ ಬುಧವಾರ ಕಲಾಪದಲ್ಲಿ ಭಾಗವಹಿಸಿಲು ಆನಂದ್ ಸಿಂಗ್ ವಿಧಾನಸೌಧ ಮೆಟ್ಟಿಲು ಹತ್ತಿದ್ದರಿಂದ ಅವರಿಗೆ ನೋವು ಹೆಚ್ಚಾಗಿತ್ತು. ಇದರಿಂದ ಅವರು ಮನೆಗೆ ತೆರಳುತ್ತಿದ್ದಂತೆ ವಾಂತಿ ಮಾಡಿಕೊಂಡಿದ್ದರು. ಬಳಿಕ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎನ್ನುವ ಕಾರಣಕ್ಕೆ ವೈದ್ಯರ ಸಲಹೆಯ ಮೆರೆಗೆ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಹಿಂದೆ ಕೂಡ ಅಪೋಲೋ ಆಸ್ಪತ್ರೆಯ ವೈದ್ಯರು ಒಂದು ವಾರ ಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿದ್ದರು. ಆನಂದ್ ಸಿಂಗ್ ಸಹ ಇನ್ನೂ ಒಂದು ವಾರ ಚಿಕಿತ್ಸೆ ನಡೆಯಲಿದೆ ಎಂದು ತಿಳಿಸಿದ್ದರು. ಈ ಮಧ್ಯೆ ಆನಂದ್ ಸಿಂಗ್ ಮಂಗಳವಾರ ಆಸ್ಪತ್ರೆಯಿಂದ ದಿಢೀರನೇ ಡಿಸ್ಚಾರ್ಜ್ ಆಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv