ಬಳ್ಳಾರಿ: ಜಿಲ್ಲೆಯ ವಿಜಯನಗರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದಲ್ಲಿನ ಆಂತರಿಕ ಗೊಂದಲಗಳಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದಾಗಿ ಹೇಳಿದ್ದಾರೆ.
ಇಂದು ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಪ್ರವಾಸಿ ಮಂದಿರದಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡರನ್ನ ಭೇಟಿ ಮಾಡಿದ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ಮೂಲಕ ಇದರಿಂದ ಹಲವು ದಿನಗಳಿಂದ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಲ್ಲದೇ ಆನಂದ್ ಸಿಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾಗಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ರಾಜಕಾರಣದಲ್ಲಿ ಶುರುವಾಗುತ್ತಾ ಜೆಡಿಎಸ್ ಪರ್ವ?
Advertisement
Advertisement
ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಆನಂದ ಸಿಂಗ್ ಅವರು, ಪಕ್ಷದಲ್ಲಿನ ಆಂತರಿಕ ಗೊಂದಲಗಳಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದಲ್ಲಿನ ಆಂತರಿಕ ಗೊಂದಲಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮತ್ತು ಜಿಲ್ಲೆಯ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದೆ. ಆದರೆ ಯಾರೂ ಸಹ ನನ್ನನ್ನು ಕರೆದು ಮಾತನಾಡಲಿಲ್ಲ. ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳಬೇಕು ಎಂದಿದ್ದರೆ ನಾಯಕರು ಕರೆದು ಮಾತನಾಡುತ್ತಿದ್ದರು. ಹೀಗಾಗಿ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದಿನ ಕೆಲವು ದಿನಗಳಲ್ಲಿ ನನ್ನ ಮುಂದಿನ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೆ ವಿರೋಧ
Advertisement
ಇದನ್ನೂ ಓದಿ: ತೆನೆ ಹೊರಲು ರೆಡಿಯಾದ ಬಿಜೆಪಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ -ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಜೆಡಿಎಸ್ ಪ್ರಾಬಲ್ಯ
Advertisement
ಇದನ್ನೂ ಓದಿ: ಕಮಲಕ್ಕೆ ಆಪರೇಷನ್: ಜೆಡಿಎಸ್‍ಗೆ ಹಾರಲಿದ್ದಾರೆ 15 ಬಿಜೆಪಿ ಶಾಸಕರು!
ಇದನ್ನೂ ಓದಿ: ಪಕ್ಷದ ವಿರೋಧದ ನಡುವೆಯೂ ಟಿಪ್ಪು ಜಯಂತಿಯಲ್ಲಿ ಭಾಗಿಯಾದ ಬಿಜೆಪಿ ಶಾಸಕ ಆನಂದ್ ಸಿಂಗ್ ಗೆ ಶೋಕಾಸ್ ನೋಟಿಸ್ ಜಾರಿ