ಮಂಗಳೂರು: ಆಪರೇಷನ್ ಕಮಲದ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಬಳ್ಳಾರಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆರ್ ಎಸ್‍ಎಸ್ ಮುಖಂಡರೊಂದಿಗೆ ಕಾಣಿಸಿಕೊಂಡಿದ್ದು, ಮತ್ತೆ ಮಾತೃಪಕ್ಷ ಬಿಜೆಪಿಗೆ ಸೇರುತ್ತಾರ ಎಂಬ ಚರ್ಚೆ ರಾಜಕೀಯ ವಲಯದಿಂದ ಕೇಳಿ ಬಂದಿದೆ.
ಆರ್ ಎಸ್‍ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಮುಂದಾಳತ್ವದಲ್ಲಿ ನಡೆಯುತ್ತಿರುವ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಭಾನುವಾರ ನಡೆದ ಕ್ರೀಡೋತ್ಸವದಲ್ಲಿ ಆನಂದ್ ಸಿಂಗ್ ಭಾಗಿಯಾಗಿದ್ದರು.
Advertisement
Advertisement
ಇಡೀ ಕಾರ್ಯಕ್ರಮದಲ್ಲಿ ಬಿಜೆಪಿ, ಆರ್ ಎಸ್‍ಎಸ್ ಮುಖಂಡರುಗಳನ್ನು ಹೊರತುಪಡಿಸಿ ಬೇರೆ ಯಾರೂ ಅತಿಥಿಗಳು ಇರಲಿಲ್ಲ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿಯೂ ಆನಂದ್ ಸಿಂಗ್ ಹೆಸರು ಇರಲಿಲ್ಲ. ಹೀಗಿದ್ದರೂ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಕುತೂಹಲ ಕೆರಳಿಸಿದೆ.
Advertisement
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಬಿಜೆಪಿ ಆಪರೇಷನ್ ನಡೆಸುತ್ತೆ ಎಂಬ ಆರೋಪ ಬಿಜೆಪಿ ಮುಖಂಡರ ಮೇಲೆ ಕೇಳಿ ಬಂದಿತ್ತು. ಆನಂದ್ ಸಿಂಗ್ ಅವರ ನಡೆ ಸದ್ಯ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದ್ದು, ಆನಂದ್ ಸಿಂಗ್ ಮತ್ತೆ ಬಿಜೆಪಿ ಸೇರುತ್ತಾರಾ ಎನ್ನುವ ಪ್ರಶ್ನೆ ಮತ್ತೆ ಹುಟ್ಟಿಕೊಂಡಿತ್ತು.
Advertisement
ಸಮ್ಮಿಶ್ರ ಸರ್ಕಾರದ ರಚನೆಗೂ ಮುನ್ನ ಆನಂದ್ ಸಿಂಗ್ ಬಿಜೆಪಿ ಸೇರುವ ಬಗ್ಗೆ ಮಾತು ಕೇಳಿಬಂದಿತ್ತು. ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಸಮಯದಲ್ಲೂ ಸದನಕ್ಕೆ ತಡವಾಗಿ ಆಗಮಿಸಿದ್ದರು. ಆದರೆ ಈ ವೇಳೆ ಅವರು ತಾವು ಕಾಂಗ್ರೆಸ್ ಪಕ್ಷದಲ್ಲೇ ಇರುವುದಾಗಿ ತಿಳಿಸಿದ್ದರು. ಆದರೆ ಬೆಳಗಾವಿ ಅಧಿವೇಶನಕ್ಕೂ ಮುನ್ನ ಕಲ್ಲಡ್ಕದಲ್ಲಿ ದಿಢೀರ್ ಆಗಿ ಕಾಣಿಸಿಕೊಂಡಿದ್ದಲ್ಲದೆ, ಪ್ರಭಾಕರ್ ಭಟ್ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಈ ಹಿಂದೆ ಶಾಸಕ ಆನಂದ್ ಸಿಂಗ್ ಬಿಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಇದ್ದಕ್ಕೆ ರಾಜ್ಯ ಬಿಜೆಪಿ ಮುಖಂಡರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಂತೆಯೇ ಜಯಂತಿಯಲ್ಲಿ ಭಾಗವಹಿಸಿದ್ದಕ್ಕೆ ಉತ್ತರ ನೀಡಬೇಕೆಂದು ಬಿಜೆಪಿ ಆನಂದ್ ಸಿಂಗ್ ಅವರಿಗೆ ಶೋಕಾಸ್ ನೋಟಿಸ್ ಸಹ ಜಾರಿ ಮಾಡಿತ್ತು. ಆ ಬಳಿಕ ನಡೆದ ಬೆಳವಣಿಗೆಯಲ್ಲಿ ಆನಂದ್ ಸಿಂಗ್ ಅವರು ಕಾಂಗ್ರೆಸ್ ಪಕ್ಷ ಸೇರಿ ಶಾಸಕರಾಗಿ ಆಯ್ಕೆ ಆಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv