ಬೆಂಗಳೂರು: ಮಹಿಳೆಯ ಮೇಲೆ ದರ್ಪ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಸಕ ಅರವಿಂದ ಲಿಂಬಾವಳಿ ಸ್ಪಷ್ಟನೆ ನೀಡುವ ಮೂಲಕ ಕಾಂಗ್ರೆಸ್‍ಗೆ ಟಾಂಗ್ ನೀಡಿದ್ದಾರೆ.
ಬೆಳ್ಳಂದೂರು ಬಳಿ ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಮಹಿಳೆಯ ಜೊತೆ ಕ್ಷಮೆ ಕೇಳೋಕೆ ಸಿದ್ಧನಿದ್ದೇನೆ. ನೀವು ನಿಮ್ಮ ಕಾರ್ಯಕರ್ತೆಯ ಕಟ್ಟಡ ಒತ್ತುವರಿ ತೆರವು ಮಾಡಿಸಿ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ
ಅರೋಪಗಳನ್ನು ಮಾಡುತ್ತಾರೆ. ಆದರೆ ಇದಕ್ಕೆಲ್ಲ ನಾನು ತಲೆಕೆಡಿಸಿಕೊಳಲ್ಲ. ಒತ್ತುವರಿಯಾಗಿರುವ ಜಾಗ ಬಿಡಿ, ಜನರಿಗೆ ತೊಂದರೆಯಿಂದ ತಪ್ಪಿಸಿ ಎಂದು ಹೇಳುವ ಮೂಲಕ ಟಿಜೆಡ್ ಅಪಾರ್ಟ್ ಮೆಂಟ್‌ಗೆ ನೀರು ತುಂಬಿದೆ ನಿಮ್ಮಿಂದ ಎಂದು ಮಹಿಳೆಗೆ ಟಾಂಗ್ ನೀಡಿದರು. ಜನರಿಗೆ ತೊಂದರೆ ಕೊಡೊದೇ ನಿಮ್ಮ ಉದ್ದೇಶನಾ ಎಂದು ಪ್ರಶ್ನಿಸಿದರು.
ಏನಿದು ಪ್ರಕರಣ..?: ಮಳೆಯಿಂದ ಹಾನಿಗೊಳಗಾದ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಿಸಲು ಅಧಿಕಾರಿಗಳ ಜೊತೆ ಅರವಿಂದ ಲಿಂಬಾವಳಿ ಬಂದಿದ್ದರು. ಈ ವೇಳೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಏರು ದನಿಯಲ್ಲಿ ಅವಾಜ್ ಹಾಕಿದ್ದಾರೆ. ನಂತರ ಮಹಿಳೆಯನ್ನು ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು ಅಕ್ಷಮ್ಯ : ಲಿಂಬಾವಳಿ ವಿರುದ್ಧ ಕಾಂಗ್ರೆಸ್ ಕಿಡಿ
ಶಾಸಕ ಅರವಿಂದ ಲಿಂಬಾವಳಿಯಿಂದ ನಿಂದನೆಗೆ ಒಳಗಾಗಿದ್ದ ಮಹಿಳೆಯ ಮೇಲೆ ಬಿಬಿಎಂಪಿ ಎಂಜಿನಿಯರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ವಿಚಾರಕ್ಕೆ ಕ್ರಮ ಕೈಗೊಳ್ಳಲು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಆರೋಪಿಸಲಾಗಿದೆ.