ಬೆಂಗಳೂರು: ನಾನು ಪೊಲೀಸ್ ಅಧಿಕಾರಿಯಾಗಿದ್ದವನು, ಹಾಗೆಯೇ ಸಿನೆಮಾ ನಟನೆಯನ್ನು ಮಾಡಿದ್ದು ನನಗೆ ಯಾವುದೇ ಜಾತಿ ಇಲ್ಲ. ಆದರೆ ರಾಜ್ಯದ 10 ಜಿಲ್ಲೆಗಳಲ್ಲಿ ಲಿಂಗಾಯತ ಸಮುದಾಯದ ಪ್ರಭಾವ ಇದ್ದು, ಅದ್ದರಿಂದ ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ಬಿಸಿ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ಬೇಕು ಎಂಬ ಬೇಡಿಕೆ ಇದ್ದು, ನಾನು ಮೂರು ಬಾರಿ ಚುನಾವಣೆಯಲ್ಲಿ ಗೆಲುವು ಪಡೆದಿದ್ದೇನೆ. ಆದರೆ ಕಳೆದ 38 ವರ್ಷಗಳಿಂದ ಹಿರೆಕೇರೂರು ಕ್ಷೇತ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ. ಈಗ ಕ್ಷೇತ್ರಕ್ಕೆ ಸಚಿವ ಸ್ಥಾನ ಲಭಿಸುವ ಅವಕಾಶವಿದ್ದು, ಪಕ್ಷದ ವರಿಷ್ಠರು ಅವಕಾಶ ಮಾಡಿಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಸಂಪುಟ ವಿಸ್ತರಣೆ ವೇಳೆ ಹಲವು ವಿಚಾರಗಳಲ್ಲಿ ಚರ್ಚೆ ನಡೆಸಬೇಕಾಗುತ್ತದೆ. ಆದ್ದರಿಂದ ಕಾಯವುದು ಸೂಕ್ತ ಎಂದು ಸುಮ್ಮನೆ ಇದ್ದೇನೆ. ಅಲ್ಲದೇ ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ನಮ್ಮ ಸಮುದಾಯದಿಂದ ಗೆದ್ದ ಏಕೈಕ ಶಾಸಕ ನಾನು. ಇಡೀ ರಾಜ್ಯದಲ್ಲಿ ಪಕ್ಷ ಕಟ್ಟುದ ಕೆಲಸ ಮಾಡುತ್ತೇನೆ. ನಾನು ಏನೇ ಹೇಳಿದರೂ ಇಲ್ಲಿ ಜಾತಿ ಬಿಟ್ಟು ಏನು ಮಾಡುವುದಿಲ್ಲ. ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಅವರು ಪಕ್ಷಕ್ಕೆ ಆಹ್ವಾನ ನೀಡಿದ್ದರು, ಆದರೆ ಈಗ ಇಲ್ಲ. ನನಗೆ ಸಚಿವ ಸ್ಥಾನ ಕೊಟ್ಟರೆ ಸಮುದಾಯದ ಅಭಿವೃದ್ಧಿಗೆ ಸಹಾಯ ಆಗಲಿದೆ. ಶೀಘ್ರ ಸಮ್ಮಿಶ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.
ಪಕ್ಷದಲ್ಲಿ ನನ್ನಂತೆ ಹಿರಿಯ ಮುಖಂಡರಾದ ದೇಶಪಾಂಡೆ, ರಾಮಲಿಂಗ ರೆಡ್ಡಿ ಅವರು ಕೂಡ ಸಚಿವ ಸ್ಥಾನ ಆಕಾಂಕ್ಷಿಗಳಿದ್ದು, ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಅದ್ದರಿಂದ ನಾನು ಎಂದು ಪಕ್ಷದ ನಿಷ್ಠವಂತ ಕಾರ್ಯಕರ್ತನಾಗಿಯೇ ಇರುತ್ತೇನೆ. ನನ್ನ ಕ್ಷೇತ್ರದ ಜನರು ಶಾಸಕ ಸ್ಥಾನ ನೀಡಿದ್ದಾರೆ. ಅದನ್ನು ಕಿತ್ತು ಕೊಳ್ಳಲು ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv