ನವದೆಹಲಿ: ಇತ್ತೀಚೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹಿಂದೂ ಮಹಾಸಭಾ ಗಣಪತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆದಿದೆ. ಆದರೆ ಭಾನುವಾರ ನಡೆದ ಈದ್ ಮಿಲಾದ್ ರ‍್ಯಾಲಿಯಲ್ಲಿ ಶಾಂತಿಕದಡಲು ಪ್ರಯತ್ನಿಸಲಾಗಿದೆ. ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು. ಇಲ್ಲದಿದ್ದರೆ ಶಿವಮೊಗ್ಗದಲ್ಲಿ (Shivamogga) ಹತ್ತಿರುವ ಕಿಡಿ ರಾಜ್ಯಕ್ಕೆ ಹಬ್ಬಿದರೂ ಆಶ್ಚರ್ಯವಿಲ್ಲ ಎಂದು ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ (B.Y.Vijayendra) ಎಚ್ಚರಿಸಿದರು.
ನವದೆಹಲಿಯಲ್ಲಿ (New Delhi) ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗ ಪೋಲಿಸರು ರ‍್ಯಾಲಿಗೆ ಒಳ್ಳೆಯ ಭದ್ರತೆ ನೀಡಿದ್ದರು. ಇದರ ನಡುವೆಯೂ ಶಾಂತಿ ಕದಡುವ ಕೆಲಸ ನಡೆದಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು. ಇಲ್ಲವಾದರೆ ಶಾಂತಿ ಕದಡುವುದಕ್ಕೆ ಕುಮ್ಮಕ್ಕು ಕೊಟ್ಟ ಹಾಗೆ ಆಗುತ್ತದೆ ಎಂದರು. ಇದನ್ನೂ ಓದಿ: ಪೊಲೀಸರ ಮೇಲೆ ಕಲ್ಲು ತೂರಾಟ ಹೊಸದೇನಲ್ಲ: ಪರಮೇಶ್ವರ್ ಬೇಜವಾಬ್ದಾರಿ ಮಾತು
Advertisement
Advertisement
ಶಿವಮೊಗ್ಗದಲ್ಲಿ ಕಲ್ಲು ತೂರಾಟ ಏನು ಹೊಸದಲ್ಲ ಎಂಬ ಗೃಹ ಸಚಿವರ ಹೇಳಿಕೆ ಬಗ್ಗೆ ಮಾತನಾಡಿ, ಇದರ ಅರ್ಥ ಯಾರು ಬೇಕಾದ್ರು ಕಲ್ಲು ತೂರಾಟ ನಡೆಸಬಹುದು ಅಂತನಾ? ಗೃಹ ಸಚಿವ ಜಿ.ಪರಮೇಶ್ವರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಇಂತಹ ಹೇಳಿಕೆಗಳಿಂದ ಅವರೇ ಪರ್ಮಿಷನ್ ಕೊಟ್ಟಹಾಗೆ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ಈ ಹಿಂದೆ ಹಲವು ಬಾರಿ ಕೋಮು ಸಂಘರ್ಷ ಘಟನೆಗಳು ಶಿವಮೊಗ್ಗದಲ್ಲಿ ನಡೆದಿವೆ. ಕೊಲೆಗಳು ಸಹ ನಡೆದಿವೆ. ಈಗ ಶಾಂತಿ ನೆಲೆಸಿತ್ತು. ಅದನ್ನ ಕದಡುವ ಕೆಲಸ ಮಾಡಲಾಗುತ್ತಿದೆ. ಹೊರ ರಾಜ್ಯದಿಂದ ಬಂದಿರೋ ಶಂಕೆಯನ್ನು ಸ್ಥಳೀಯ ಶಾಸಕರು ವ್ಯಕ್ತಪಡಿಸಿದ್ದಾರೆ. ಆ ಬಗ್ಗೆಯೂ ತನಿಖೆ ಆಗಬೇಕು. ಮೊದಲೇ ರಾಜ್ಯದಲ್ಲಿ ಕಾವೇರಿ ವಿಚಾರದಲ್ಲಿ ಗಲಾಟೆ ಇದೆ. ಮತ್ತೆ ಈ ರೀತಿ ಗಲಾಟೆಯಾದರೇ ಇಡೀ ರಾಜ್ಯಕ್ಕೆ ಗಲಭೆ ಹಬ್ಬಬಹುದು ಎಂದರು. ಇದನ್ನೂ ಓದಿ: ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ
Advertisement
ವೈಯಕ್ತಿಕ ಕಾರಣಕ್ಕಾಗಿ ನಾನು ದೆಹಲಿಗೆ ಬಂದಿದ್ದೇನೆ. ಯಾವುದೇ ರಾಷ್ಟ್ರೀಯ ನಾಯಕರ ಭೇಟಿಗೆ ಬಂದಿಲ್ಲ. ವಿರೋಧ ಪಕ್ಷ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ನಾನಂತು ಯಾವುದೇ ಆಸೆ ಇಲ್ಲದೆ ಪಕ್ಷದ ಕೆಲಸ ಮಾಡುತ್ತಿದ್ದೇನೆ. ಪಕ್ಷದ ವರಿಷ್ಠರು ರಾಜ್ಯದ ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಯಾರಿಗೆ ಕೊಟ್ಟರೂ, ಅವರ ಜೊತೆಗೆ ಕೆಲಸ ಮಾಡುತ್ತೇನೆ. ಆಯ್ಕೆಯ ವಿಳಂಬಕ್ಕೆ ಹೈಕಮಾಂಡ್ ಬಳಿ ಸೂಕ್ತ ಕಾರಣ ಇರುತ್ತೆ ಎಂದರು. ಹೆಚ್.ಡಿ. ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಮಾಡುತ್ತಾರೆ ಎಂಬ ಚರ್ಚೆಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.
Web Stories