ವಿಜಯಪುರ: ನನಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೊಂಡಿದ್ದಾರೆ.
ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸೆಪ್ಟಂಬರ್ 28 ರಂದು ಮಧ್ಯಾಹ್ನ 2:45 ಸುಮಾರಿಗೆ ಇಂಟರ್‌ನೆಟ್ ಮೂಲಕ ಕರೆ ಮಾಡಿ ಅನಾಮಧೇಯ ವ್ಯಕ್ತಿಯೊಬ್ಬ, ಬಸನಗೌಡ ಪಾಟೀಲ ಯತ್ನಾಳ್ ಅಂದ್ರೆ ನೀನೇನಾ? ಹಿಂದೂಗಳ ಪರವಾಗಿ ತುಂಬಾನೇ ಮಾತನಾಡುತ್ತಿದ್ದಿ, ಹುಷಾರ್, ನಿನ್ನನ್ನು ನೋಡಿಕೊಳ್ಳುತ್ತೇವೆ ಎಂದು ಎಂದು ಹೇಳಿ ಬೆದರಿಕೆ ಹಾಕಿದ್ದ ಎಂದು ತಿಳಿಸಿದರು.
Advertisement
ಫೋನ್ ಕರೆ ಬಂದ ಕೂಡಲೇ ನಾನು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂಗೆ ಮೌಕಿಕವಾಗಿ ಮಾಹಿತಿ ನೀಡಿದ್ದೇನೆ. ಇಂಟರ್‌ನೆಟ್ ಕರೆಯನ್ನು ಮಾಡಿದವರನ್ನು ಕಂಡುಹಿಡಿಯಲು ಎಸ್‍ಪಿ ಅವರು ಸಂಬಂಧ ಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
Advertisement
Advertisement
ಜೀವ ಬೆದರಿಕೆ ಕರೆಗೆ ಪ್ರತಿಕ್ರಿಯಿಸಿದ ಅವರು ಇಂತಹ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ, ಜಗ್ಗಲ್ಲ. ನನ್ನ ಹಿಂದೂ ಪರ ಸಂಘಟನೆಯ ಕಾರ್ಯಕ್ರಮಗಳು ಮುಂದುವರಿಯುತ್ತದೆ. ನನ್ನ ಜವಾಬ್ದಾರಿಯನ್ನ ನಾನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv