– ಯುವಕರನ್ನು ವಶಕ್ಕೆ ಪಡೆದ ಪೊಲೀಸರು
ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವುದಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಯುವಕರ ತಂಡವೊಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರ ಕಾರಿಗೆ ಘೇರಾವ್ ಹಾಕಲು ಯತ್ನಿಸಿದ ಘಟನೆ ನಡೆದಿದೆ.ಇದನ್ನೂ ಓದಿ: Ramanagara | ರಸ್ತೆಯಲ್ಲಿ ವೀಲ್ಹಿಂಗ್ ಮಾಡಿ ವಾಹನ ಸವಾರರಿಗೆ ತೊಂದರೆ – ನಾಲ್ವರ ಬಂಧನ
ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಬೆಂಗಾವಲು ಕಾರುಗಳೊಂದಿಗೆ ಹೋಗುತ್ತಿದ್ದಾಗ ಕೆಲ ಯುವಕರು ಯತ್ನಾಳ್ ಕಾರಿನ ಎದುರಿಗೆ ಬಂದು ಸುತ್ತವರಿಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತೀಚಿಗೆ ಕೊಪ್ಪಳದಲ್ಲಿ ಹಿಂದೂ ಯುವಕನ ಕೊಲೆಯಾಗಿತ್ತು. ಈ ವೇಳೆ ಯತ್ನಾಳ್ ಅವರು ಮುಸ್ಲಿಂ ಯುವತಿಯರನ್ನ ಹಿಂದೂ ಯುವಕರು ಮದುವೆ ಆದರೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಮೂಲಕ ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಯುಳ್ಳ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ ಎಂದು ತಿಳಿಸಿದ್ದರು. ಯತ್ನಾಳ್ ನೀಡಿದ್ದ ಈ ಹೇಳಿಕೆ ಖಂಡಿಸಿ ಯುವಕರು ಘೇರಾವ್ ಹಾಕಲು ಯತ್ನಿಸಿದ್ದಾರೆ.ಇದನ್ನೂ ಓದಿ: ಬುರುಡೆ ಕೇಸ್ ಹಿಂದೆ ಕೈ ಸಂಸದ ಶಶಿಕಾಂತ್ ಸೆಂಥಿಲ್ ಇದ್ದಾರೆ: ಯಶ್‌ಪಾಲ್ ಸುವರ್ಣ