ಬೆಂಗಳೂರು: ಅಂಗರಕ್ಷನ ಬಳಿಯಿಂದ ಶೂ (Shoe) ಹಾಕಿಸಿಕೊಂಡು ವಿವಾದಕ್ಕೀಡಾದ ಬಳಿಕ ಸಮರ್ಥನೆ ಮಾಡಿಕೊಂಡು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ (Dr. H.C Mahadevappa) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಇಷ್ಟು ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ವಿಶ್ರಾಂತಿ ಪಡೆಯಿರಿ.
ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡುತ್ತಿದ್ದಿರಿ?
ವಿವಾದವಾಗಿದ್ದು ದುರದೃಷ್ಟಕರವಲ್ಲ ನಿಮ್ಮಂತಹ ನಾಟಕೀಯ ಮಜವಾದಿಗಳು ಸಮಾಜವಾದದ ಬಗ್ಗೆ ಮಾತನಾಡುವುದು ದುರದೃಷ್ಟಕರ. https://t.co/JAaYwE2U5Y
— Basanagouda R Patil (Yatnal) (@BasanagoudaBJP) November 8, 2023
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಯತ್ನಾಳ್ (Basangouda Patil Yatnal), ಇಷ್ಟು ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ವಿಶ್ರಾಂತಿ ಪಡೆಯಿರಿ. ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡುತ್ತಿದ್ದಿರಿ?. ವಿವಾದವಾಗಿದ್ದು ದುರದೃಷ್ಟಕರವಲ್ಲ ನಿಮ್ಮಂತಹ ನಾಟಕೀಯ ಮಜವಾದಿಗಳು ಸಮಾಜವಾದದ ಬಗ್ಗೆ ಮಾತನಾಡುವುದು ದುರದೃಷ್ಟಕರ ಎಂದು ಗರಂ ಆಗಿದ್ದಾರೆ. ಇದನ್ನೂ ಓದಿ: ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ
ಆದರೆ ಹಿಂದೆ Hip joint knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ
ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿಗಳ ಬಳಿ ಕಾಲಿನ ಸಮಸ್ಯೆಯ ಹಿನ್ನಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ
2/3
— Dr H.C.Mahadevappa (@CMahadevappa) November 8, 2023
ಮಹದೇವಪ್ಪ ಸಮರ್ಥನೆ ಏನು..?: ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ ಹಿಂದೆ Hip Joint Knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ.
ಸಹಾಯಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ.
ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಇಂತಹ ಸಣ್ಣಪುಟ್ಟ ವಿವಾದಗಳಿಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ.
ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ಧನ್ಯವಾದಗಳು
3/3
— Dr H.C.Mahadevappa (@CMahadevappa) November 8, 2023
ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿ ಬಳಿ ಕಾಲಿನ ಸಮಸ್ಯೆಯ ಹಿನ್ನೆಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ. ಸಹಾಯಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ. ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಇಂತಹ ಸಣ್ಣಪುಟ್ಟ ವಿವಾದಗಳಿಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ಧನ್ಯವಾದಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಆಗಿದ್ದೇನು..?: ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅವರು ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ ವಿಚಾರಿಸಿ, ವಿದ್ಯಾರ್ಥಿಗಳಿಂದ ಅಹವಾಲು ಕೂಡ ಸ್ವೀಕರಿಸಿದರು. ಹಾಸ್ಟೆಲ್‍ಗೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿದ ನಂತರ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಸಚಿವರು ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಪ್ರಸಂಗ ನಡೆಯಿತು. ಸಚಿವರ ಈ ನಡೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.