ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ (Basavaraj Shivaganga) ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತನನ್ನು ದಾವಣಗೆರೆ (Davanagere) ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್
ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ, ನನಗೆ ಜೀವನ ಸಾಕಾಗಿದೆ ಸಾಯುತ್ತೀನಿ ಎಂದು ಹೇಳಿ, ಫೆ.17ರಂದು ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಮಧ್ಯಪ್ರಾಚ್ಯ ಸಂಘರ್ಷ; ಡಾಲರ್ ಎದುರು ದಾಖಲೆಯ 92.52 ಕ್ಕೆ ಕುಸಿದ ರೂಪಾಯಿ ಮೌಲ್ಯ

