ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಅಭದ್ರತೆ ಕಾಡ್ತಿದೆ. ಹೀಗಾಗಿ ವಿಪಕ್ಷಗಳ ನಾಯಕರ ಮೇಲೆ FIR ದಾಖಲು ಮಾಡಿ ಟಾರ್ಗೆಟ್ ಮಾಡ್ತಿದ್ದಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನಾಯಕರ ಮೇಲೆ FIR ದಾಖಲು ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯಗೆ ಅಭದ್ರತೆ ಕಾಡ್ತಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪಗಳು ಕೇಳಿ ಬರ್ತಿವೆ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಲು ಈ ಸರ್ಕಾರ ವಿಫಲವಾಗಿದೆ. ಅಭಿವೃದ್ಧಿ ಕೆಲಸ ಆಗ್ತಿಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ: ರಾಜ್ಯ ಸರ್ಕಾರಕ್ಕೆ ಜೋಶಿ ಆಗ್ರಹ
ಹೊಸ ಕೇಸ್‌ಗಳನ್ನ ವಿಪಕ್ಷಗಳ (Opposition Party) ಮೇಲೆ ಹಾಕ್ತಿದ್ದಾರೆ. ರಾಜ್ಯದ ಜನರಿಗೆ ಗೊತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್, ಮುಡಾ ಹಗರಣದಲ್ಲಿ ಸಿಎಂ ಫಿಕ್ಸ್ ಆಗಿದ್ದಾರೆ ಅಂತ. ರಾಜ್ಯದಲ್ಲಿ ಕೋಮುಗಲಭೆಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡ್ತಿದ್ದಾರೆ. ಇದೇ ಸಮಯದಲ್ಲಿ ವಿಪಕ್ಷಗಳ ನಾಯಕರನ್ನ ಈ ಸರ್ಕಾರ ಟಾರ್ಗೆಟ್ ಮಾಡ್ತಿದೆ ಅಂತ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ರು; ಒಡಿಶಾ ಠಾಣೆಯಲ್ಲಿ ಅನುಭವಿಸಿದ ಯಾತನೆಯ ಕತೆ ಹೇಳಿದ ಸೇನಾಧಿಕಾರಿಯ ಭಾವಿ ಪತ್ನಿ