ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 5 ವರ್ಷದ ಬಾಲಕಿ ಮೇಲೆ ಲೈಂಗಿನ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯನಗರ ಪೊಲೀಸ್ ಠಾಣೆ ಮುಂದೆ ಆಕ್ರೋಶ ಹೊರಬಿದ್ದಿದ್ದು, ಇತ್ತ ಶಾಸಕ ಬೈರತಿ ಸುರೇಶ್ ಅವರು ಠಾಣೆ ಬಳಿ ಓಡೋಡಿ ಬಂದಿದ್ದರು.
Advertisement
ದೌರ್ಜನ್ಯ ಎಸಗಿದವನನ್ನು ನೇಣಿಗೆ ಹಾಕುತ್ತೇವೆ. ದಯವಿಟ್ಟು ಪ್ರತಿಭಟನೆ ಕೈಬಿಡಿ ಅಂತ ಕೇಳಿಕೊಂಡಿದ್ದಾರೆ. ಆದರೆ ನೆರೆದಿದ್ದ ಜನ ಸುತರಾಂ ಒಪ್ಪಲಿಲ್ಲ. ಈ ವೇಳೆ ಶಾಸಕರು, ಬಾಲಕಿ ತಂದೆಯಿಂದಲೂ ಮನವಿ ಮಾಡಿಸಿದ್ದರು. ಕೊನೆಗೆ ಪೊಲೀಸರೇ ಜನರನ್ನು ಚದುರಿಸಿದ ಪ್ರಸಂಗ ನಡೆದಿದೆ.
Advertisement
Advertisement
ಸದ್ಯ ಸಂಜಯನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇಂದು ಜಡ್ಜ್ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗುತ್ತದೆ. ಕೃತ್ಯ ಭಾನುವಾರ 5 ಗಂಟೆ ಸುಮಾರಿಗೆ ಮಗುವಿನ ತಾಯಿ ಗಮನಕ್ಕೆ ಬಂದಿದೆ. ನಿನ್ನೆ ರಾತ್ರಿ 8 ಗಂಟೆಗೆ ದೂರು ಬಂದಿದೆ. ತಕ್ಷಣವೇ ಆರೋಪಿಯನ್ನು ಬಂಧಿಸಿದ್ದೇವೆ. ಪೋಕ್ಸೋ ಕಾಯಿದೆ ಅಡಿ ದೂರು ದಾಖಲಿಸಿದ್ದೇವೆ ಎಂದು ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಹೇಳಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತನೆ- ಠಾಣೆ ಎದುರು ಬಿಗುವಿನ ವಾತಾವರಣ
Advertisement
ಏನಿದು ಪ್ರಕರಣ?: ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೆದ್ದಲಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಯುವಕನೊಬ್ಬ ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈತನನ್ನು ಸಂಜಯ್ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಮಾಡುತ್ತಿದ್ದರು. ಈ ವಿಷಯ ಕಾಳ್ಗಿಚ್ಚಿನಂತೆ ಈ ಪ್ರದೇಶದಲ್ಲಿ ಹರಡಿತು. ತಕ್ಷಣ ಸ್ಥಳಕ್ಕೆ ಬಂದ ಸಾವಿರಾರು ಮಂದಿ ಸಾರ್ವಜನಿಕರು ಪೊಲೀಸ್ ಠಾಣೆ ಮುಂದೆ ಗಲಾಟೆ ಮಾಡಿದ್ದರು. ಅಲ್ಲದೇ ಆರೋಪಿಯನ್ನು ಕರೆದುಕೊಂಡು ಹೋಗಲು ಮುಂದಾದ ಪೊಲೀಸರ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಆರ್ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ!
ಪೊಲೀಸ್ ಠಾಣೆ ಮುಂದೆ ಬಿಗುವಿನ ವಾತಾವರಣ ಕಂಡುಬಂದಿತ್ತು. ಪೊಲೀಸರು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆದಿತ್ತು. ಘಟನಾ ಸ್ಥಳಕ್ಕೆ ಹೆಚ್ಚಿನ ಭದ್ರತೆಗಾಗಿ ಕೆಎಸ್‍ಆರ್‍ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಕ್ಷಣ ಕ್ಷಣಕ್ಕೂ ಪ್ರತಿಭಟನಕಾರರು ಹೆಚ್ಚಾಗುತ್ತಿರೋ ಹಿನ್ನೆಲೆ ಪೊಲೀಸರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಇನ್ಸ್‍ಪೆಕ್ಟರ್ ಬಾಲರಾಜ್ ಪ್ರತಿಭಟನಾಕಾರರನ್ನು ಮನವೋಲಿಸಲು ಪ್ರಯತ್ನ ಪಟ್ಟರೂ ಅವರ ಮಾತಿಗೆ ಸೊಪ್ಪು ಹಾಕದೆ ಆಕ್ರೋಶ ವ್ಯಕ್ತಪಡಿಸಿದ್ದರು. ಆರೋಪಿಯನ್ನು ನಮಗೆ ಬಿಟ್ಟುಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದ್ದರು.