ಚಾಮರಾಜನಗರ: ಲಾಕ್‍ಡೌನ್ ಸಂದರ್ಭದಲ್ಲಿ ಅನೇಕರು ಬಡವರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ಗಡಿ ಜಿಲ್ಲೆ ಚಾಮರಾಜನಗರ ಕ್ಷೇತ್ರದ ಶಾಸಕ, ಮಾಜಿ ಸಚಿವ ಪಬ್ಲಿಕ್ ಟಿವಿ ಚಾಲೆಂಜ್ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಲಾಕ್‍ಡೌನ್ ನಡುವೆ ಕ್ಷೇತ್ರದ ಜನತೆಗೆ ಸಹಾಯ ಹಸ್ತ ಚಾಚುವ ಕೆಲಸಕ್ಕೆ ಮುಂದಾಗಿದ್ದಾರೆ.
ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಬಡವರು, ನಿರ್ಗತಿಕರಿಗೆ ಆಹಾರ ಸಮಸ್ಯೆ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಆಹಾರದ ಕಿಟ್ ವಿತರಿಸಿದ್ದಾರೆ. ಸುಮಾರು ಎಂಟು ಸಾವಿರ ಬಡ ಕುಟುಂಬಗಳಿಗೆ ವೈಯಕ್ತಿಕವಾಗಿ ಆಹಾರ ಧಾನ್ಯ ವಿತರಿಸಿದ್ದಾರೆ.
Advertisement
Advertisement
ಲಾಕ್‍ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಬಡವರಿಗೆ ಅಕ್ಕಿ ವಿತರಿಸುತ್ತಿದೆ. ಆದರೆ ಉಳಿದ ಪದಾರ್ಥಗಳಿಗೆ ಜನರು ಪರದಾಡುವಂತಾಗಿದೆ. ಇದನ್ನು ಮನಗಂಡ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಕ್ಕಿ, ಬೇಳೆ, ಅವರೆಕಾಳು, ಹುರುಳಿ ಕಾಳು, ಹಲಸಂದೆ, ಅಡುಗೆ ಎಣ್ಣೆ, ಸಕ್ಕರೆ, ಟೀ ಪುಡಿ, ಉಪ್ಪು ಸೇರಿದಂತೆ ಅತ್ಯಗತ್ಯ ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಿ ಬಡವರಿಗೆ ಹಂಚುತ್ತಿದ್ದಾರೆ.
Advertisement
ಒಂದೂವರೆ ಸಾವಿರಕ್ಕೂ ಹೆಚ್ಚು ಬುಡಕಟ್ಟು ಸೋಲಿಗರು ಸೇರಿದಂತೆ ಎಂಟು ಸಾವಿರ ಬಡ ಕೂಲಿಕಾರ್ಮಿಕ ಕುಟುಂಬಗಳಿಗೆ ಅವರು ಆಹಾರ ಧಾನ್ಯ ವಿತರಿಸಿದ್ದಾರೆ. ನನಗೆ ಪ್ರಚಾರ ಬೇಡ, ಕ್ಷೇತ್ರದ ಜನರ ಹಿತ ಕಾಯವುದು ನನ್ನ ಧರ್ಮ. ಜನರ ಕಷ್ಟಸುಖಗಳಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.