ಮೈಸೂರು: ಕಾಂಗ್ರೆಸ್ ಸೇರ್ಪಡೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾರಿಗೆ ಮುತ್ತಿಗೆ ಹಾಕಿದ್ದಾರೆ.
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕಿರಸಗೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಟಿ.ನರಸೀಪುರ ತಾಲೂಕಿನ ಹುಣಸೂರು ಗ್ರಾಮದ ಕಾಂಗ್ರ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕಿರಸಗೂರು ಹಾಗೂ ಹುಣಸೂರು ಎರಡೂ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜಿಸಿದ್ದರು.
Advertisement
Advertisement
ಈ ವೇಳೆ ಡಾ. ಯತೀಂದ್ರ ಕಿರಸಗೂರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹುಣಸೂರಿಗೆ ಆಗಮಿಸದೆ ತೆರಳುತ್ತಿದ್ದರು. ಇದರಿಂದ ಅಸಮಾಧಾನ ವ್ಯಕ್ತಪಡಿಸಿ ಹುಣಸೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಯತೀಂದ್ರ ಕಾರನ್ನು ಅಡ್ಡ ಹಾಕಿದರು. ಆದರೂ ಕಾರ್ಯಕರ್ತರ ಮನವಿಗೆ ಸ್ಪಂದಿಸದೆ ಕಾರಿನಿಂದ ಇಳಿಯದೆ ಡಾ.ಯತೀಂದ್ರ ತೆರಳಿದರು.
Advertisement
ಇದರಿಂದ ಕೋಪಗೊಂಡ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv