ರಾಮಮನಗರ: ಬಿಜೆಪಿ (BJP) ಬಳಿಕ ಇದೀಗ ಕಾಂಗ್ರೆಸ್‌ನ ಕೆಲ ನಾಯಕರು ರಾಮನ ಜಪಕ್ಕೆ ಮುಂದಾಗುತ್ತಿದ್ದಾರೆ. 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ರಾಮನಗರದಲ್ಲಿ ರಾಮೋತ್ಸವಕ್ಕೆ (Sri Rama Utsava) ಚಿಂತನೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕಾಂಗ್ರೆಸ್ (Congress) ಶಾಸಕ ಇಕ್ಬಾಲ್ ಹುಸೇನ್ (Iqbal Hussain) ನೇತೃತ್ವದಲ್ಲಿ ಶ್ರೀರಾಮನ ಉತ್ಸವ ನಡೆಸುವ ಕಾರ್ಯಕ್ರಮ ರೂಪಿಸಲು ಸಿದ್ಧತೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು
Advertisement
Advertisement
ಗುರುವಾರ ನಡೆದ ಯುವ ಉತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಈ ಬಗ್ಗೆ ಮಾತನಾಡಿದ್ದು, ಶೀಘ್ರದಲ್ಲೇ ರಾಮೋತ್ಸವ ಕಾರ್ಯಕ್ರಮ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಬಸ್‌ನಲ್ಲಿ ಸೀಟ್ ವಿಚಾರಕ್ಕೆ ವೃದ್ಧ ಪ್ರಯಾಣಿಕನ ಮೇಲೆ ನಾಲ್ವರು ಮಹಿಳೆಯರಿಂದ ಹಲ್ಲೆ
Advertisement
Advertisement
ಇದರಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಿಂದೂ ಮತಗಳ ಓಲೈಕೆಗೆ ಕಾಂಗ್ರೆಸ್ ಮುಂದಾಯ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿ ರಾಮಮಂದಿರ ಅಭಿವೃದ್ಧಿ ವಿಚಾರ ಪ್ರಸ್ತಾಪಿಸಿತ್ತು. ಅದೇ ರಾಮಬಾಣ ಪ್ರಯೋಗಿಸಿರುವ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಶ್ರೀರಾಮನ ಉತ್ಸವಕ್ಕೆ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಸುಗಳ ಮಾಂಸ ಬಳಕೆ ಆರೋಪ- ಸಾಕುಪ್ರಾಣಿಗಳ ಆಹಾರ ತಯಾರಿಕಾ ಕಾರ್ಖಾನೆ ಮೇಲೆ ದಾಳಿ
Web Stories