– ಅಮಿತ್ ಶಾ ಹೇಳಿಕೆಗೆ ಶೆಟ್ಟರ್ ಬಹುಪರಾಕ್
ಹುಬ್ಬಳ್ಳಿ: ಮುಂದಿನ ಚುನಾವಣೆ ನೇತೃತ್ವ ಬೊಮ್ಮಾಯಿಯವರಿಗೆ ನೀಡಿದ್ದು ಒಳ್ಳೆಯ ಸಂಗತಿ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕುಟುಂಬ ಸಮೇತವಾಗಿ ಮತದಾನ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ನಡೆಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ್ದಾರೆ.
Advertisement
Advertisement
ಗುರುವಾರ ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ಚುನಾವಣೆಯನ್ನು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಸುವುದಾಗಿ ಘೋಷಿಸಿರುವುದು ಒಳ್ಳೆಯ ಸಂಗತಿಯಾಗಿದೆ. ಪಕ್ಷದ ನಿರ್ಧಾರದಂತೆ ನಾವೂ ಮುಂದುವರೆಯುತ್ತೇವೆ. ಆದರೆ ಮುಂದಿನ ಚುನಾವಣೆ ಇನ್ನೂ ದೂರ ಇದೆ. ಜೊತೆಗೆ ಸರ್ಕಾರದಲ್ಲಿ ಹಿರಿಯರನ್ನು ಕಡೆಗಣಿಸಿದ ಬಗ್ಗೆ ಈಗಾಗಲೇ ನಾವು ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿದ್ದೇವೆ ಎಂದು ತಿಳಸಿದರು. ಇದನ್ನೂ ಓದಿ: ಮನೆಗಾಗಿ ಭಿಕ್ಷೆ ಬೇಡುತ್ತಿಲ್ಲ, ಇಂದು ಕೊನೆಯ ಪತ್ರ ಬರೆಯುವೆ- ಸರ್ಕಾರದ ವಿರುದ್ಧ ಹೊರಟ್ಟಿ ಬೇಸರ
Advertisement
Advertisement
ಪಾಲಿಕೆ ಚುನಾವಣೆಯಲ್ಲಿ ಸಕ್ರೀಯವಾಗಿ ಭಾಗವಹಿಸಿ ನಾನು ಪ್ರಚಾರ ಮಾಡಿರುವೆ. ಜನರಿಂದ ಸಾಕಷ್ಟು ಉತ್ತಮ ಪ್ರತಿಕ್ರಿಯೆ ಇದೆ. ಪಾಲಿಕೆ ಚುನಾವಣೆಯ 82 ಸ್ಥಾನಗಳಲ್ಲಿ 60ಕ್ಕೂ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ಟಿಕೆಟ್ ಆಕ್ಷಾಂಕಿಗಳ ಮಧ್ಯೆ ಸಾಕಷ್ಟು ಪೈಪೋಟಿ ಇತ್ತು. 700ಕ್ಕೂ ಹೆಚ್ಚು ಜನರು ಆಕ್ಷಾಂಕಿಗಳು ಇದ್ದರು. ಕೆಲವು ಕಡೆ ಬಂಡಾಯಕೋರರು ಸ್ಪರ್ಧೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಬಂಡಾಯಗಾರರಿಗೆ ಬೆಂಬಲ ನೀಡಿಲ್ಲ. ಬಂಡಾಯಗಾರರು ಯಾರು ಗೆಲುವು ಸಾಧಿಸುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.