ಗಾಂಧಿನಗರ: 2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ನಾಯಕ, ಶಾಸಕ ಜಿಗ್ನೇಶ್ ಮೇವಾನಿ (Jignesh Mevani)ಮತ್ತು ಇತರ 18 ಮಂದಿಗೆ ಅಹಮದಾಬಾದ್ ನ್ಯಾಯಾಲಯವು (Ahmedabad Court) 6 ತಿಂಗಳು ಜೈಲು (Jail) ಶಿಕ್ಷೆ ವಿಧಿಸಿದೆ.
Advertisement
ಗುಜರಾತ್ ವಿಶ್ವವಿದ್ಯಾನಿಲಯದ ಕಾನೂನು ಭವನ (Gujarat Universitys Law Bhavan) ಕಟ್ಟಡಕ್ಕೆ ಡಾ.ಬಿ.ಆರ್. ಅಂಬೇಡ್ಕರ್ (BR Ambedker) ಅವರ ಹೆಸರನ್ನು ಮರುನಾಮಕರಣ ಮಾಡುವಂತೆ 2016ರಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 20 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಓರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಉಳಿದ 19 ಮಂದಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ – ನಲಪಾಡ್ ಅಕಾಡೆಮಿಗೆ ಬಿಗ್ ರಿಲೀಫ್
Advertisement
Advertisement
ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಜಿಗ್ನೇಶ್ ಮೇವಾನಿ ಮೇಲೆ ಹಲ್ಲೆ ನಡೆದಿತ್ತು. ಬಳಿಕ ರಾಜ್ಯದ ಮಾಜಿ ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಅವರ ಗೂಂಡಾಗಳಿಂದ ದಾಳಿ ನಡೆಸಲಾಗಿದೆ ಎಂದು ಮೇವಾನಿ ಅವರ ತಂಡವು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು.