ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಕೋಲಾರ ಜಿಲ್ಲಾಸ್ಪತ್ರೆಗೆ (Kolar District Hospital) ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆ ಭೇಟಿ ವೇಳೆ ರೋಗಿಗಳ ಜೊತೆ ಶಾಸಕ ಕೊತ್ತೂರು ಮಂಜುನಾಥ್ ಮಾತುಕತೆ ನಡೆಸಿದ್ದು, ಆಸ್ಪತ್ರೆಯಲ್ಲಿನ ಚಿಕಿತ್ಸೆ ಸೇರಿದಂತೆ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ರಾಜಸ್ಥಾನಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 35 ಟನ್ ಪಡಿತರ ಅಕ್ಕಿ ಜಪ್ತಿ: ಲಾರಿ ತಡೆದು ಸ್ಥಳೀಯರ ಆಕ್ರೋಶ
ಶುಚಿತ್ವ ಸೇರಿದಂತೆ ಕಟ್ಟಡ, ಹಾಗೂ ಪಾರ್ಕಿಂಗ್ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಸೂಚನೆ ನೀಡಿದ್ದಾರೆ. ರೋಗಿಗಳಿಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕಾರವಾರ | ಪದವೀಧರರ ಕ್ಷೇತ್ರದ ಚುನಾವಣೆ; ಅ.23ಕ್ಕೆ ವಿಶೇಷ ಸಾಂದರ್ಭಿಕ ರಜೆ

