BelgaumDistrictsKarnatakaLatestMain Post

ಬಿ.ಎಸ್ ಯಡಿಯೂರಪ್ಪ ಭೇಟಿಯಾದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಇಂದು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

ಈಶ್ವರಪ್ಪ ರಾಜೀನಾಮೆ ಆಗ್ರಹಿಸಿ ಖಾಸಗಿ ಹೊಟೆಲ್ ನಲ್ಲಿ ಮಾಜಿ ಸಿಎಂ ಅವರನ್ನು ಶಾಸಕಿ ಭೇಟಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಯಡಿಯೂರಪ್ಪ ಜೊತೆಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಿಮ್ಮ ಪಕ್ಷದವರೇ ಈಶ್ವರಪ್ಪ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಸಂತೋಷ್ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಿ ಎಂದು ಶಾಸಕಿ ಆಗ್ರಹಿಸಿದರು. ಇದನ್ನೂ ಓದಿ: ಪಕ್ಷಕ್ಕೆ ಮುಜುಗರ ತರಿಸಲ್ಲ, ರಾಜೀನಾಮೆ ಕೊಡ್ತೀನಿ: ಈಶ್ವರಪ್ಪ

ಬೆಳಗಾವಿಯ ಸುಭಾಷ್ ನಗರದಲ್ಲಿ ವೀರಶೈವ ಲಿಂಗಾಯತ ಬಡ ವಿದ್ಯಾರ್ಥಿನಿಯರಿಗಾಗಿ ಉಚಿತ ವಸತಿ ನಿಲಯ ಕಟ್ಟಡ ಅಡಿಗಲ್ಲು ಸಮಾರಂಭ ಕಾರ್ಯಕ್ರಮದಲ್ಲಿ ಬಿಎಸ್‍ವೈ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮುಖಾಮುಖಿಯಾದರು. ಕಾರ್ಯಕ್ರಮದಲ್ಲಿ ಸಂಸದೆ ಮಂಗಲ ಅಂಗಡಿ, ಸಚಿವ ಮುರುಗೇಶ್ ನಿರಾಣಿ, ಎಂಎಲ್‍ಸಿ ಚನ್ನರಾಜ ಹಟ್ಟಿಹೊಳಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಸೇರಿ ಹಲವರು ಭಾಗಿಯಾಗಿದ್ದಾರೆ.

Leave a Reply

Your email address will not be published.

Back to top button