ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಆಕಸ್ಮಿಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಕೋಮು ಸೌಹಾರ್ದತೆ ಕೆಡಿಸುವ ಯತ್ನ ನಡೆಸಿದ್ದಾರೆ. ಹೀಗಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತಕ್ಷಣ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು. ಜೊತೆಗೆ ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎನ್ನುವ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಉದ್ವಿಗ್ನ ಪರಿಸ್ಥಿತಿಯಿಂದ ಕರ್ನಾಟಕಕ್ಕೆ ಬರಲು ಕೈಗಾರಿಕೋದ್ಯಮಿಗಳು ಹೆದರುತ್ತಿದ್ದಾರೆ: ಎಂ.ಬಿ.ಪಾಟೀಲ್
ಬೈಕ್- ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಜಗಳ ನಡೆದು ಆಕಸ್ಮಿಕವಾಗಿ ನಡೆದ ಕೊಲೆ ಪ್ರಕರಣವನ್ನು ಗೃಹ ಸಚಿವರು ತಿರುಚಲು ಯತ್ನಿಸಿದ್ದಾರೆ. ಇಡೀ ರಾಜ್ಯದ ಶಾಂತಿ, ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರಿಂದ ಇಂತಹ ಆಘಾತಕಾರಿ ಹೇಳಿಕೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದ್ದಂತೆ ಕಾಣುತ್ತಿದೆ. ಈ ಬಗ್ಗೆ ತನಿಖೆ ನಡೆಸಬೇಕು. ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಸಚಿವರನ್ನು ತಕ್ಷಣ ವಜಾಗೊಳಿಸಿ ಬಂಧಿಸಬೇಕು ಎಂದು ಹೆಬ್ಬಾಳ್ಕರ್ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ರಂಜಾನ್ ತಿಂಗಳಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಂಧ್ರ ಸರ್ಕಾರದಿಂದ ವಿಶೇಷ ಆದ್ಯತೆ