ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ (MP Kumaraswamy) ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮೂಡಿಗೆರೆ ತಾಲೂಕಿನ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ ಸ್ಪಷ್ಟಪಡಿಸಿದರು.
ಇಂದು ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಓಂಕಾರೇಶ್ವರ ದೇವಾಲಯದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ-ಕುಂದೂರು ಗ್ರಾಮದಲ್ಲಿ ನಡೆದ ಶಾಸಕ ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ಸತ್ಯಾಸತ್ಯತೆಯನ್ನೂ ನೀವೇ ಪರಿಶೀಲನೆ ಮಾಡಿ, ತಪ್ಪಿತಸ್ಥರಿಗೆ ನ್ಯಾಯ, ನೀತಿ, ಧರ್ಮದ ಆಧಾರದಲ್ಲಿ ಶಿಕ್ಷೆ ಕೊಡು ಎಂದು ಓಂಕಾರೇಶ್ವರನಲ್ಲಿ ಬೇಡಿಕೊಂಡಿದ್ದಾರೆ. ನಾನು ಒಳ್ಳೆಯ ಸಂಸ್ಕೃತಿಯಿಂದ ಬಂದವನು. ನಾನು ಅಷ್ಟು ಕೀಳುಮಟ್ಟದ ರಾಜಕಾರಣವನ್ನು ಮಾಡುವ ಸಣ್ಣ ಮನಸ್ಸಿನ ವ್ಯಕ್ತಿಯಲ್ಲ ಎಂದರು.
Advertisement
Advertisement
ಮೂರು ದಿನಗಳ ಹಿಂದೆ ಮೂಡಿಗೆರೆ ತಾಲೂಕಿನ ಹುಲ್ಲೇಮನೆ-ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ್ದಳು. ಶಾಸಕ ಕುಮಾರಸ್ವಾಮಿ ಸ್ಥಳ ಪರಿಶೀಲನೆಗೆಂದು ಹೋದಾಗ ಕುಂದೂರು ಗ್ರಾಮದಲ್ಲಿ ಮಾತಿಗೆ-ಮಾತು ಬೆಳೆದು ಗಲಾಟೆಯಾಗಿತ್ತು. ಈ ವೇಳೆ ಸ್ಥಳೀಯರು ಶಾಸಕರ ಮೇಲೂ ಹಲ್ಲೆ ಮಾಡಿದ್ದರು. ಆ ಬಳಿಕ ಶಾಸಕ ಕುಮಾರಸ್ವಾಮಿ ನನ್ನ ಮೇಲಿನ ಹಲ್ಲೆಗೆ ದೀಪಕ್ ದೊಡ್ಡಯ್ಯನೇ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಎಲ್ಲರ ಕೈನಲ್ಲೂ ದೊಣ್ಣೆ ಇತ್ತು – ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನು ಅಟ್ಟಾಡಿಸಿ ಹೊಡೆದರು: ಎಂ.ಪಿ ಕುಮಾರಸ್ವಾಮಿ
Advertisement
Advertisement
ಹಾಗಾಗಿ, ಇಂದು ದೀಪಕ್ ದೊಡ್ಡಯ್ಯ ಓಂಕಾರೇಶ್ವರ ದೇವಾಲಯದಲ್ಲಿ ನನಗೂ ಈ ಹಲ್ಲೆಗೂ ಯಾವುದೇ ಸಂಬಂಧವಿಲ್ಲ. ತಪ್ಪಿತಸ್ಥರ ವಿರುದ್ಧ ನೀನೇ ಸೂಕ್ತ ಶಿಕ್ಷೆ ನೀಡು ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ. ನಾನು ಸಾವಿರಾರು ಮಕ್ಕಳಿಗೆ ಪಾಠ ಮಾಡಿದ್ದೇನೆ. ಜವಾಬ್ದಾರಿಯುತ ಸ್ಥಾನಗಳನ್ನು ನಿರ್ವಹಿಸಿದ್ದೇನೆ. ಅಂತಹ ಕೀಳು ಮನಸ್ಸಿನ ವ್ಯಕ್ತಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಕುಮಾರಸ್ವಾಮಿ ಇದು ರಾಜಕೀಯ ದಾಳಿ ಎಂದು ಆರೋಪ ಮಾಡುತ್ತಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಹಾಲು, ಮೊಸರಿನ ದರ 2 ರೂ. ಏರಿಕೆ