ದಾವಣಗೆರೆ: ಬಂದ್ ವೇಳೆ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ರನ್ನು ಪೊಲೀಸರು ಬಂಧಿಸಿದ್ದಾರೆ.
ಸಮರ್ಪಕ ಮರಳು ಪೂರೈಕೆ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರ ಪೀಡಿತವನ್ನಾಗಿ ಘೋಷಣೆ ಮಾಡುವಂತೆ ರೇಣುಕಾಚಾರ್ಯರವರು ನ್ಯಾಮತಿ ಹಾಗೂ ಹೊನ್ನಾಳಿ ಬಂದ್ ಗೆ ಕರೆ ನೀಡಿದ್ದರು. ಅಲ್ಲದೇ ಶನಿವಾರ ನ್ಯಾಮತಿ ತಾಲೂಕಿನಲ್ಲಿ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿತ್ತು. ಹೀಗಾಗಿ ಸೋಮವಾರ ಹೊನ್ನಾಳಿ ಬಂದ್‍ಗೆ ಕರೆ ಕೊಟ್ಟಿದ್ದರು.
ಬಂದ್ ವೇಳೆ ಶಾಸಕರು ರಸ್ತೆ ತಡೆ ನಡೆಸಿ, ಸಾರ್ವಜನಿಕರಿಗೆ ಕಿರುಕುಳ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರ ಜೊತೆಗೂ ವಾಗ್ವಾದ ನಡೆಸಿದ್ದರು. ರೇಣುಕಾಚಾರ್ಯರ ವರ್ತನೆಗೆ ಬೇಸತ್ತ ಪೋಲಿಸರು. ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶಾಸಕರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲದೇ 10 ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv