ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್‌ಗೆ (N Mahesh) ಎದೆನೋವು ಕಾಣಿಸಿಕೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ (Mysuru Private Hospital) ದಾಖಲಿಸಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎನ್.ಮಹೇಶ್‌ಗೆ ಆ್ಯಂಜಿಯೋಗ್ರಾಮ್ (Angiogram) ಮಾಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸದ್ಯ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ
ಈ ಸಂಬಂಧ ಶಾಸಕ ಎನ್.ಮಹೇಶ್ ಪುತ್ರ ಅರ್ಜುನ್ ಮಾತನಾಡಿದ್ದು, ನಮ್ಮ ತಂದೆ ಆರೋಗ್ಯವಾಗಿದ್ದಾರೆ. ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದೆವು. ವೈದ್ಯರು ಆ್ಯಂಜಿಯೋಗ್ರಾಮ್ ಮಾಡಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. ಎರಡು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ, ಯಾವುದೇ ಆತಂಕವಿಲ್ಲ ಎಂದು ಹೇಳಿದ್ದಾರೆ.
ಶಾಸಕ ಎನ್.ಮಹೇಶ್ ಶನಿವಾರ ಕೆಪಿಸಿಸಿ ಅಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಂತಿಮ ದರ್ಶನದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಒತ್ತಡದ ರಾಜಕಾರಣಕ್ಕೆ ಧ್ರುವನಾರಾಯಣ್ ಬಲಿಯಾಗಿದ್ದಾರೆ: ಎನ್.ಮಹೇಶ್
ಏನಿದು ಆ್ಯಂಜಿಯೋಗ್ರಾಮ್?
ದೇಹದ ಆರೋಗ್ಯ ಸ್ಥಿತಿ ತಿಳಿದುಕೊಳ್ಳಲು ಹಾಗೂ ಉತ್ತಮ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳಲು ನಡೆಸುವ ಚಿಕಿತ್ಸಾ ಕ್ರಮ. ಹೃದಯದಿಂದ ರಕ್ತನಾಳಗಳ ಮೂಲಕ ರಕ್ತ ಹೇಗೆ ಹರಿಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಈ ಚಿಕಿತ್ಸಾ ವಿಧಾನ ಬಳಸುತ್ತಾರೆ.