ಮಂಡ್ಯ: ಕೆಂಪೇಗೌಡ ಜಯಂತಿ ವೇಳೆ ತಮಟೆ ಸದ್ದಿಗೆ ಕೆಆರ್ ಪೇಟೆ ಶಾಸಕ ನಾರಾಯಣಗೌಡ ಸಖತ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ಕೆಂಪೇಗೌಡ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಕೆಆರ್ ಪೇಟೆಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗಿತ್ತು. ಮೆರವಣಿಗೆ ವೇಳೆ ತಮಟೆ ಸದ್ದಿಗೆ ಕೆಆರ್ ಪೇಟೆ ಶಾಸಕ ನಾರಾಯಣಗೌಡ ಸಖತ್ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ರು.
ಇದೇ ವೇಳೆ ಶಾಸಕರ ಜೊತೆಗಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಎಚ್‍ಟಿ ಮಂಜು, ತಾಲೂಕು ಪಂಚಾಯಿತಿ ಸದಸ್ಯ ಸುಧಾಕರ್ ಸೇರಿದಂತೆ ಹಲವರು ಶಾಸಕರ ಜೊತೆ ಸ್ಟೆಪ್ ಹಾಕಿ ಸಂಭ್ರಮಿಸಿದ್ರು.