ಚಿತ್ರದುರ್ಗ: ಮೊಳಕಾಲ್ಮೂರು (Molakalmuru) ಕ್ಷೇತ್ರದ ಹಿರಿಯ ಶಾಸಕ ಎನ್‌ವೈ ಗೋಪಾಲಕೃಷ್ಣಗೆ (NY Gopalakrishna) ಮಂತ್ರಿಗಿರಿ ಕೈತಪ್ಪಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಅವರ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರಾಂಪುರ ಬಸ್ ನಿಲ್ದಾಣ ಬಳಿ ಸಾರಿಗೆ ಬಸ್ ತಡೆದು ಕಿಡಿಕಾರಿದ ಪ್ರತಿಭಟನಾಕಾರರು, ಟೈರಿಗೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಖಾಲಿ ಇರೋ ಮಹಿಳಾ ಸಚಿವ ಸ್ಥಾನ ಆದಷ್ಟು ಬೇಗ ಭರ್ತಿ: ಪ್ರಿಯಾಂಕ್ ಖರ್ಗೆ
ಕೈನಲ್ಲಿ ವಿಷದ ಬಾಟಲಿ ಹಾಗೂ ಪೆಟ್ರೋಲ್ ಪ್ರದರ್ಶಿಸಿದ ಪ್ರತಿಭಟನಾಕಾರರು ಎನ್‌ವೈ ಗೋಪಾಲಕೃಷ್ಣಗೆ ಮಂತ್ರಿಗಿರಿ ನೀಡಬೇಕು. ಸಚಿವ ಸ್ಥಾನ ನೀಡದಿದ್ದರೆ ವಿಷ ಸೇವಿಸುತ್ತೇವೆ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ ಮಾಡಿದ್ದಾರೆ. ಇದನ್ನೂ ಓದಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಸ್‌ಆರ್ ಶ್ರೀನಿವಾಸ್ ಬೇಸರ – KSRTC ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ
