ಮಂಗಳೂರು: ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ಅವರು (63) ವಿಧಿವಶರಾಗಿದ್ದಾರೆ.
ಅಬ್ದುಲ್ ರಜಾಕ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ವೇಳೆ ನಿಧನರಾಗಿದ್ದಾರೆ. ಅಬ್ದುಲ್ ರಜಾಕ್ ಅವರು 2016ರಲ್ಲಿ ಎರಡನೇ ಬಾರಿ ಶಾಸಕರಾಗಿದ್ದರು.
ಅಬ್ದುಲ್ ರಜಾಕ್ ಅವರು ಅನೇಕ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದಗೇ ಇಂದು ನಸುಕಿನ ಜಾವ ಮೃತಪಟ್ಟಿದ್ದಾರೆ.
ಅಬ್ದುಲ್ ರಜಾಕ್ 85 ಮತಗಳಿಂದ ಅಚ್ಚರಿಯ ಗೆಲುವು ಸಾಧಿಸಿದ್ದರು. ಇವರು ಜೂನ್ 2, 2016ರಲ್ಲಿ ಕೇರಳ ವಿಧಾನಸಭೆ ಚುನಾವಣೆ ಅಯ್ಕೆಯಾಗಿದ್ದರು. ಕೇರಳ ವಿಧಾನ ಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕನ್ನಡದ ಕಂಪನ್ನು ಸಾರಿದ್ದರು. 2011ರಲ್ಲಿ ಮುಸ್ಲಿಂ ಲೀಗ್ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv