ಚಿಕ್ಕಬಳ್ಳಾಪೂರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅಚ್ಚರಿ ಎನ್ನುವಂತೆ ಬಿಗ್ ಬಾಸ್ (Bigg Boss Kannada) ಮನೆ ಪ್ರವೇಶ ಮಾಡಿದ್ದಾರೆ. ಎಲ್ಲ ಸ್ಪರ್ಧಿಗಳನ್ನು ಸುದೀಪ್ ಶನಿವಾರವೇ ದೊಡ್ಮನೆ ಒಳಗೆ ಕಳುಹಿಸಿದ್ದರೆ, ಒಂದು ದಿನ ತಡವಾಗಿ ಪ್ರದೀಪ್ ದೊಡ್ಮನೆ ಪ್ರವೇಶ ಮಾಡಿದ್ದಾರೆ. ಡೊಳ್ಳು ಕುಣಿತ ಮೂಲಕ ಅವರನ್ನು ಬಿಗ್ ಬಾಸ್ ಮನೆಗೆ ಸ್ವಾಗತ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು. ತುಕಾಲಿ ಸಂತು, ‘ನಾವು ಒಬ್ಬ ಎಂ.ಎಲ್.ಎ ಜೊತೆ ಸ್ಪರ್ಧೆ ಮಾಡಬೇಕು’ ಎಂದು ಮಾತನಾಡಿದರೆ, ಅದಕ್ಕೆ ಪ್ರದೀಪ್, ‘ನಾವು ಸೋಲಬೇಕು ಅಂತಾನೆ ಬೆಂಗಳೂರಿಗೆ ಬಂದವನು’ ಎಂದು ಉತ್ತರಿಸಿದ್ದಾರೆ. ಪ್ರದೀಪ್ ಈಶ್ವರ್ ಮನೆಗೆ ಬಂದಿರುವುದು ಹೊಸ ಕಳೆ ಬಂದಂತಾಗಿದೆ. ಒಬ್ಬ ಜನಪ್ರತಿನಿಧಿ ಎಷ್ಟು ದಿನ ಆ ಮನೆಯಲ್ಲಿ ಉಳಿಯಬಹುದು ಎನ್ನುವುದೇ ಅಚ್ಚರಿ.
ಚಾರ್ಲಿ ಮನೆಗೆ ಬರಲಿಲ್ಲ
ಈ ಬಾರಿ ಚಾರ್ಲಿ ಬಿಗ್ ಬಾಸ್ ಮನೆ ಒಳಗೆ ಪ್ರವೇಶ ಮಾಡಲಿದೆ ಎಂದು ವಾಹಿನಿ ಹೇಳಿಕೊಂಡಿತ್ತು. ಚಾರ್ಲಿ(Charli) ದೊಡ್ಮನೆಗೆ ಬಂದೇ ಬರುತ್ತಾನೆ ಎಂದು ಎಲ್ಲರೂ ನಿರೀಕ್ಷೆಯಿಂದ ಕಾಯುತ್ತಿದ್ದರು. ಆದರೆ, ಇಂದು ಗ್ರ್ಯಾಂಡ್ ಓಪನಿಂಗ್ ಸಮಯದಲ್ಲಿ ಚಾರ್ಲಿ ಕಾಣಿಸಿಕೊಳ್ಳಲೇ ಇಲ್ಲ. ಹಾಗಾಗಿ ಸಹಜವಾಗಿ ಚಾರ್ಲಿ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಚಾರ್ಲಿ ಎಲ್ಲಿ ಎಂದು ಬಿಗ್ ಬಾಸ್ ಅನ್ನು ಅಭಿಮಾನಿಗಳು ಕೇಳುತ್ತಿದ್ದಾರೆ.
ಚಾರ್ಲಿಯನ್ನು ಬಿಗ್ ಬಾಸ್ ಮನೆಗೆ ಕರೆದುಕೊಂಡು ಬರುವುದೇ ಇಲ್ಲವಾ? ಅಥವಾ ಸ್ಪೆಷಲ್ ಟಾಸ್ಕ್ ಮೂಲಕ ಮನೆ ಒಳಗೆ ಪ್ರವೇಶ ಮಾಡುತ್ತದಾ ಗೊತ್ತಿಲ್ಲ. ಆದರೆ, ಸ್ಪರ್ಧಿಗಳ ಜೊತೆಯಂತೂ ಚಾರ್ಲಿ ಬರಲಿಲ್ಲ. ಸುದೀಪ್ ಅವರ ಮುಂದೆ ನಿಲ್ಲಲಿಲ್ಲ. ಹಾಗಾಗಿ ಚಾರ್ಲಿ ಬರುತ್ತದೆಯೋ ಇಲ್ಲವೋ ಎನ್ನುವ ಅನುಮಾನ ಕೂಡ ಮೂಡಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]