ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapura) ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮನೆಯ ಮೇಲೆ ಕಳೆದ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಗೃಹ ಕಚೇರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಮನೆಯ ಬೃಹತ್ ಗಾತ್ರದ ಕಿಟಕಿ ಗಾಜು ಪುಡಿಪುಡಿಯಾಗಿದೆ. ಕಳೆದ ರಾತ್ರಿ 10:30 ರಿಂದ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಗೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ವೃತ್ತ ನಿರೀಕ್ಷಕ ಮಂಜುನಾಥ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇಂದು ನಾವು ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ: ಉದ್ಧವ್ ಠಾಕ್ರೆ
ಮನೆಯ ಹಿಂಭಾಗದಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಈ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಇಂದು ದೆಹಲಿಯಲ್ಲಿ ಎನ್‌ಡಿಎ ಮಹತ್ವದ ಸಭೆ – ಜೂ.9ರಂದು ಮೋದಿ ಪ್ರಮಾಣ ವಚನ ಸ್ವೀಕಾರ?