ವಿಜಯನಗರ: ಸರ್ಕಾರದ ಆದೇಶಕ್ಕೆ ಬೆಲೆ ಕೊಡದೇ ಸರ್ಕಾರಿ ಕಚೇರಿ ಆವರಣದಲ್ಲಿಯೇ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬಾರದು ಎಂದು ಸರ್ಕಾರದ ಆದೇಶವಿದ್ದರೂ, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರು ತಮ್ಮ ಹುಟ್ಟುಹಬ್ಬವನ್ನು ಹೂವಿನಹಡಗಲಿ ಪುರಸಭೆ ಆವರಣದಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.
ನಿನ್ನೆ ಅವರು 58ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಹಾಗೂ ಅವರ ಬೆಂಬಲಿಗರು, ಸರ್ಕಾರದ ಆದೇಶಕ್ಕೆ ಡೊಂಟಕೇರ್ ಎಂದ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಇದನ್ನೂ ಓದಿ: ನಾನು ಇನ್ನೆರಡು ತಿಂಗಳು ಇರೋದಿಲ್ಲ, ನಾನು ಎಲ್ಲದಕ್ಕೂ ರೆಡಿ ಇದ್ದೀನಿ: ಶಂಕಿತ ಉಗ್ರ
ಸರ್ಕಾರಿ ಅಧಿಕಾರಿಗಳು ಶಾಸಕ ಪರಮೇಶ್ವರ ನಾಯ್ಕಗೆ ಶಾಲು ಹೊಂದಿಸಿ ಸನ್ಮಾನ ಮಾಡಿ ಸತ್ಕರಿಸಿದ್ದಾರೆ. ಸರ್ಕಾರಿ ಅಧಿಕಾರಿಗಳಿಂದಲೂ ಸರ್ಕಾರದ ಆದೇಶ ಉಲ್ಲಂಘನೆಯಾಗಿದೆ. ಪರಮೇಶ್ವರ್ ನಾಯ್ಕ ಹಾಗೂ ಪುರಸಭೆ ಅಧಿಕಾರಿಗಳ ವರ್ತನೆಗೆ ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಎಸಿ ರೈಲಿನ ಒಳಗಡೆಯೇ ಛತ್ರಿ ಹಿಡಿದು ಕುಳಿತ ಪ್ರಯಾಣಿಕರು