ಮಂಡ್ಯ: ರೈತ ಬಂಧು, ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ ನಿಧನದಿಂದ ಮನನೊಂದ ಯುವಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
25 ವರ್ಷದ ಚಂದು ಮೃತ ಯುವಕ. ಕ್ಯಾತನಹಳ್ಳಿ ನಿವಾಸಿಯಾಗಿರೋ ಚಂದು ಹಲವು ವರ್ಷಗಳಿಂದ ರೈತ ನಾಯಕ ಪುಟ್ಟಣ್ಣಯ್ಯ ಅವರ ಅನುಯಾಯಿಯಾಗಿದ್ದರು. ಹೀಗಾಗಿ ತಮ್ಮ ನಾಯಕನ ಅಕಾಲಿಕ ಮರಣದಿಂದ ಮನನೊಂದು ಯುವಕ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
Advertisement
Advertisement
ಪುಟ್ಟಣ್ಣಯ್ಯ ಅವರ ಅಪ್ಪಟ ಅಭಿಮಾನಿಯಾಗಿದ್ದ ಚಂದು, ಇತ್ತೀಚೆಗೆ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಿಂದಲೇ ಆಚರಿಸಿದ್ದರು. ಆದ್ರೆ ಅವರು ವಿಧಿವಶವಾದ ಬಳಿಕ ಚಂದು ಸಾಕಷ್ಟು ಮನನೊಂದಿದ್ದರು. `ನಾನು ಪುಟ್ಟಣ್ಣಯ್ಯ ಅವರ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟು, ಪುಟ್ಟಣ್ಣಯ್ಯ ಅಭಿಮಾನಿ ಬಳಗದ ಟಿ ಶರ್ಟ್ ಧರಿಸಿಕೊಂಡೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ರೈತ ಬಂಧು ಕೆಎಸ್ ಪುಟ್ಟಣ್ಣಯ್ಯ ಬದುಕಿನ ಪುಟಗಳ ಒಂದಿಷ್ಟು ಮಾಹಿತಿ ಇಲ್ಲಿದೆ
Advertisement
Advertisement
ಸ್ವತಃ ಕಬಡ್ಡಿ ಪಟು, ಕುಸ್ತಿ ಪಟುವಾಗಿದ್ದ ರೈತ ಬಂಧು, ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆಎಸ್ ಪುಟ್ಟಣ್ಣಯ್ಯ ಅವರು ಫೆ. 18ರಂದು ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಣೆಗೆ ಆಗಮಿಸಿದ್ದ ವೇಳೆ ಮರತಪಟ್ಟರು. ಈ ಪಂದ್ಯದಲ್ಲಿ ಪುಟ್ಟಣ್ಣಯ್ಯ ಬೆಂಬಲಿತ ಪಾಂಡವಪುರ ಟೀಂ ಗೆದ್ದಿತ್ತು. ಹೀಗಾಗಿ ಗೆದ್ದ ತಂಡವನ್ನು ಸನ್ಮಾನಿಸಲು ಪುಟ್ಟಣ್ಣಯ್ಯ ವೇದಿಕೆ ಮೇಲೆ ಆಸೀನರಾಗಿದ್ದರು. ಅಭಿಮಾನಿಗಳು, ಸ್ಥಳೀಯ ಮುಖಂಡರೊಂದಿಗೆ ಕುಳಿತು ಖುಷಿಯಾಗಿಯೇ ಪಂದ್ಯ ವೀಕ್ಷಿಸಿದ್ದ ಪುಟ್ಟಣ್ಣಯ್ಯರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ನೋಡನೋಡುತ್ತಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಇದನ್ನೂ ಓದಿ: ಪುಟ್ಟಣ್ಣಯ್ಯರ ಕೊನೆ ಕ್ಷಣಗಳನ್ನ ನೆನೆದು ಕಣ್ಣೀರು ಹಾಕಿದ ಪತ್ನಿ, ಮಗ
ಪುಟ್ಟಣ್ಣಯ್ಯ ಅಂತ್ಯಕ್ರಿಯೆ ಇಂದು ಹುಟ್ಟೂರು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ. ಈಗಾಗಲೇ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಯಿಂದ ಮೃತದೇಹ ಮೆರವಣಿಗೆ ಮೂಲಕ ಸ್ವಗ್ರಾಮ ಕ್ಯಾತನಹಳ್ಳಿಗೆ ರವಾನೆಯಾಗಿದೆ. ಕ್ಯಾತನಹಳ್ಳಿಯ ಸರ್ಕಾರಿ ಶಾಲಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಯವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಇದನ್ನೂ ಓದಿ: ಚಿತ್ರದಲ್ಲಿಯೂ ನಟಿಸಿ ಸೈ ಎನ್ನಿಸಿಕೊಂಡಿದ್ದ ರೈತ ಬಂಧು – ರೈತರ ಪರ ಖಡಕ್ ಡೈಲಾಗ್ ಹೊಡೆದಿದ್ದ ಪುಟ್ಟಣ್ಣಯ್ಯ