ಚಾಮರಾಜನಗರ: ಕಾಂಗ್ರೆಸ್ (Congress) ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಸ್ಪೀಕರ್ ಹುದ್ದೆಯನ್ನು ಶಾಸಕ ಪುಟ್ಟರಂಗಶೆಟ್ಟಿ (Puttaranga Shetty) ತಿರಸ್ಕರಿಸಿದ್ದಾರೆ.
ಸಚಿವ ಸ್ಥಾನ ವಂಚಿತ ಪುಟ್ಟರಂಗಶೆಟ್ಟಿಗೆ ಡೆಪ್ಯುಟಿ ಸ್ಪೀಕರ್ (Deputy Speaker) ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿತ್ತು. ಇದೀಗ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ, ನಾನು ಶಾಸಕನಾಗಿಯೇ ಮುಂದುವರಿಯುತ್ತೇನೆಂದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಉಪ್ಪಿನ ಮೋಳೆಯ ನಿವಾಸದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನೆಗೂ ಮುನ್ನ ಕಾರ್ಮಿಕರನ್ನು ಸನ್ಮಾನಿಸಿದ ಮೋದಿ
ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸುವುದು ಕಷ್ಟವಾಗಲಿದೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಕಾರ್ಯಭಾರದ ಒತ್ತಡದಿಂದ ಕ್ಷೇತ್ರದ ಕೆಲಸ ಮಾಡಲು ಕಷ್ಟವಾಗುತ್ತೆ. ಡೆಪ್ಯುಟಿ ಸ್ಪೀಕರ್ ಆದರೆ ಕ್ಷೇತ್ರದ ಜನರ ಕೈಗೆಟುಕುವುದಿಲ್ಲ. ಹಾಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡ ಎಂಬುದು ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರ ಒತ್ತಾಯವಾಗಿದೆ ಎಂದರು.
ನಾನು ಉಪ್ಪಾರ ಸಮಾಜದ ಏಕೈಕ ಶಾಸಕನಾಗಿದ್ದೇನೆ. ಯಾವಾಗಲೂ ಜನರ ಜೊತೆ ಬೆರೆತು ಕೆಲಸ ಮಾಡುವವನು. ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್ ಒತ್ತಾಯಿಸಿದ್ದರು. ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಕೈ ತಪ್ಪಿದೆ. ಕಾರಣ ಏನೆಂದು ಗೊತ್ತಿಲ್ಲವೆಂದು ಶಾಸಕ ಪುಟ್ಟರಂಗಶೆಟ್ಟಿ ಬೇಸರ ವ್ಯಕ್ತಪಡಿಸಿದರು.