ಕೊಪ್ಪಳ: ನಗರ ಸಭೆ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾತಿ ಆಗಿತ್ತು. ಇದೀಗ ಶಾಸಕರು ನಗರಸಭೆ ಮೀಸಲಾತಿಯನ್ನೆ ಬದಲಾವಣೆ ಮಾಡಿದ್ದಾರೆ.
ಶಾಸಕ ರಾಘವೇಂದ್ರ ಹಿಟ್ನಾಳ್ ರಿಂದ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯನ್ನ ಬದಲಿಸಿ ಅಲ್ಪಸಂಖ್ಯಾತ ಅಮ್ಜದ್ ಪಟೇಲ್ ಅಧ್ಯಕ್ಷ ಸ್ಥಾನ ಸಿಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪರಿಣಾಮ ಸಾಮಾಜಿಕ ಜಾಲತಾಣದಲ್ಲಿ ಬದಲಾವಣೆ ವಿರೋಧಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫಲಿತಾಂಶ ಬಂದ ದಿನದಿಂದ ತಮ್ಮ ಆಪ್ತರಾದ, ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್ ಹಾಗೂ ಮುತ್ತು ಕುಷ್ಟಗಿರೊಂದಿಗೆ ಶಾಸಕರು ಬೆಂಗಳೂರಲ್ಲಿ ಬೀಡುಬಿಟ್ಟಿದ್ದರು. ಈ ವೇಳೆ ಮುಸ್ಲಿಂ ಮತಗಳ ಒಲೈಕೆಗಾಗಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನ ಬದಲಾವಣೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv