ಮೈಸೂರು: ದೇವಸ್ಥಾನ ತೆರವು ವಿಚಾರದಲ್ಲಿ ಆ ಧರ್ಮ ಈ ಧರ್ಮ ಎಂಬುದೇನೂ ಇಲ್ಲ ಎನ್ನುವ ಮೂಲಕ ಶಾಸಕ ರಾಮದಾಸ್ ಅವರು ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ದೇವಸ್ಥಾನ ತೆರವು ವಿಚಾರ ಕ್ರಮ ಸರಿಯಲ್ಲ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಅವರ ಅಭಿಪ್ರಾಯ ಬೇರೆ, ನನ್ನ ಅಭಿಪ್ರಾಯ ಬೇರೆ. ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವು ಮಾಡುತ್ತಿಲ್ಲ. ಮೊದಲು ದೇವಸ್ಥಾನಗಳನ್ನು ಉಳಿಸಿಕೊಳ್ಳಲು ಯೋಚನೆ ಮಾಡಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಸೋನಿಯಾ ಗಾಂಧಿ ಅನಿವಾರ್ಯತೆ ಇದೆ, ನಮಗೆ ಇಲ್ಲ: ಪ್ರತಾಪ್ ಸಿಂಹ
- Advertisement
- Advertisement
ಮೊದಲ ಹಂತದಲ್ಲಿ ದೇವಸ್ಥಾನವನ್ನು ಉಳಿಸಿಕೊಳ್ಳಲು ಆಗದಿದ್ದರೆ ಎರಡನೇ ಹಂತದಲ್ಲಿ ಸ್ಥಳಾಂತರಕ್ಕೆ ಚಿಂತನೆ ಮಾಡುತ್ತಿದ್ದೇವೆ. ಇದೆರೆಡು ಸಾಧ್ಯವಾಗದಿದ್ದಾಗ ಮಾತ್ರ ತೆರವು ಕಾರ್ಯ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಆ ಧರ್ಮದ್ದು ಈ ಧರ್ಮದ್ದು ಎಂಬುದೇನು ಇಲ್ಲ. ಸುಪ್ರೀಂ ಕೋರ್ಟ್ ಸೂಚನೆಯಂತೆ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ನಿಮ್ಮ ಧಮ್ಕಿಗೆ ಹೆದರಲ್ಲ – ಪ್ರತಾಪ್ ಸಿಂಹಗೆ ತನ್ವೀರ್ ಸೇಠ್ ತಿರುಗೇಟು
ನಾವು ಆದಷ್ಟು ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಉಳಿಸಿಕೊಳ್ಳಲು ಹಾಗೂ ಸ್ಥಳಾಂತರಿಸಲು ಪ್ರಯತ್ನ ನಡೆಸಿದ್ದೇವೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರುತ್ತೇವೆ. ಇದರಲ್ಲಿ ಒಂದು ಕ್ಷೇತ್ರ ಒಂದು ಧರ್ಮ ಎಂಬುವ ವಿಚಾರ ಇರುವುದಿಲ್ಲ ಎಂದು ರಾಮದಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ
ಪ್ರತಾಪ್ ಸಿಂಹ ಹೇಳಿದ್ದೇನು..?
ಕೇವಲ ಹಿಂದೂ ಧರ್ಮದ ದೇವಸ್ಥಾನಗಳನ್ನು ಮಾತ್ರ ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ. ರಸ್ತೆ ಆಗಲೀಕರಣಕ್ಕೆ ತೊಂದರೆಯಾಗಿರುವ ಇರ್ವಿನ್ ರಸ್ತೆಯ ಮಸೀದಿಯನ್ನು ತೆರವುಗೊಳಿಸಿಲ್ಲ. ದೇವರಾಜ ರಸ್ತೆಯಲ್ಲಿರುವ ದರ್ಗಾವನ್ನು ಯಾಕೆ ತೆರವು ಮಾಡಿಲ್ಲ ಎಂದು ಮೈಸೂರು ಜಿಲ್ಲಾಡಳಿತದ ವಿರುದ್ಧ ಸಂಸದ ಪ್ರತಾಪ್ ಸಿಂಹ ಕೆಡಿಪಿ ಮೀಟಿಂಗ್‍ನಲ್ಲಿ ಕಿಡಿಕಾರಿದ್ದರು.