ಮುಖ್ಯಮಂತ್ರಿ ಚೇಂಜ್ ಆದ್ರೂ ಆಗ್ಬಹುದು: ಶಾಸಕ ಎಸ್.ರಾಮಪ್ಪ

Public TV
1 Min Read
S Ramappa

ದಾವಣಗೆರೆ: ಮುಖ್ಯಮಂತ್ರಿಗಳು ಚೇಂಜ್ ಆದರೂ ಆಗಬಹುದು ಎಂದು ಹೇಳುವ ಮೂಲಕ ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಶಾಸಕರು, ಕಾಂಗ್ರೆಸ್ ಎಲ್ಲಿರುತ್ತೋ, ಅಲ್ಲಿ ನಾನಿರುತ್ತೇನೆ. ಹಾಗಾಗಿ ಯಾರು ರಾಜೀನಾಮೆ ಕೊಟ್ಟರೂ ನಾನು ತಲೆ ಕೆಡಿಸಿಕೊಳ್ಳಲ್ಲ. ಒಂದು ವೇಳೆ ಮುಖ್ಯಮಂತ್ರಿಗಳು ಬದಲಾವಣೆ ಆದರೆ ಆಗಬಹುದು. ಮೈತ್ರಿ ಸರ್ಕಾರ ಮಾತ್ರ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

S Ramappa 1.jpg

ನಾನೋರ್ವ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಕೆಲವರು ನನ್ನ ಹಿಂದೆ ಬಿದ್ದಿದ್ದಾರೆ. ಈಗಾಗಲೇ ನಾನು ಪಕ್ಷ ತೊರೆಯಲ್ಲ ಎಂಬುದನ್ನ ಅವರೆಲ್ಲರಿಗೂ ಸ್ಪಷ್ಟಪಡಿಸಿದ್ದೇನೆ. ನಾನು ಪಕ್ಷ ತೊರೆಯಲು ಸಿದ್ಧ ಎಂದರೆ ಹಣ ನೀಡಲು ತಯಾರಾಗಿದ್ದಾರೆ. ಆದ್ರೆ ನಾನು ಪಕ್ಷ ಬಿಡುವ ವಿಷಯವೇ ಇಲ್ಲಿ ಬರಲ್ಲ. ನಗರಸಭೆ ಸದಸ್ಯನಾಗಿದ್ದ ನನ್ನನ್ನು ಅಧ್ಯಕ್ಷ, ಶಾಸಕನಾಗಿ ಮತದಾರರು ಆಯ್ಕೆ ಮಾಡಿದ್ದಾರೆ. ಬೇರೆ ಪಕ್ಷಕ್ಕೆ ಹೋದ್ರೆ ನಮಗೆ ನಾವೇ ಮೋಸ ಮಾಡಿಕೊಂಡಂತೆ. 64 ಸಾವಿರ ಜನರು ಮತ ನೀಡಿ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದು, ಮತದಾರರಿಗೆ ಮೋಸ ಮಾಡಲ್ಲ ಎಂದು ತಿಳಿಸಿದರು.

JDS CONGRESS LEADERS

ಚುನವಾಣೆ ವೇಳೆ ನಾನು ಜನರಿಗೆ ನೀಡಿದ್ದ ಮಾತಿನಂತೆ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ. ಚುನಾವಣೆಯಲ್ಲಿ ಕ್ಷೇತ್ರದ ಜನತೆಗೆ ನೀಡಿದ ಮಾತಿನಂತೆ ನಡೆದುಕೊಳ್ಳುತ್ತೇನೆ. ಸರ್ಕಾರ ಮಾತ್ರ ಯಾವುದೇ ಕಾರಣಕ್ಕೂ ವಿಸರ್ಜನೆ ಆಗಲ್ಲ. ಮಧ್ಯಂತರ ಚುನಾವಣೆಗೂ ಕಾಂಗ್ರೆಸ್ ಮತ್ತು ಜೆಡಿಎಸ್ ನ ಯಾವ ಶಾಸಕರು ಒಪ್ಪಿಕೊಳ್ಳಲ್ಲ. ಸಿಎಂ ಬದಲಾಗಬಹುದು ಅಷ್ಟೇ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *